ಕಾವೇರಿ ವಿವಾದದಲ್ಲಿ ಮಧ್ಯಪ್ರವೇಶಿಸುವುದಿಲ್ಲ: ಪ್ರಧಾನಿ ಮೋದಿ ಸ್ಪಷ್ಟನೆ

ಗುರುವಾರ, 22 ಸೆಪ್ಟಂಬರ್ 2016 (13:06 IST)
ಕಾವೇರಿ ವಿವಾದದಲ್ಲಿ ಮಧ್ಯ ಪ್ರವೇಶಿಸುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ನೀಡಿದ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಕೋಲಾಹಲ ಸೃಷ್ಟಿಸಿದೆ.
 
ಕೇಂದ್ರ ಸಚಿವರಾದ ಅನಂತ್ ಕುಮಾರ್, ಸದಾನಂದಗೌಡ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಸೇರಿದಂತೆ ಹಲವು ನಾಯಕರು ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿದಾಗ ನಾನು ಮಧ್ಯಪ್ರವೇಶಿಸುವುದಿಲ್ಲ. ಜಲಸಂಪನ್ಮೂಲ ಸಚಿವೆ ಉಮಾಭಾರತಿಯವನ್ನು ಭೇಟಿ ಮಾಡುವಂತೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ.
 
ಪ್ರಧಾನಿ ಮೋದಿ ಸಲಹೆಯಂತೆ ಜಲಸಂಪನ್ಮೂಲ ಖಾತೆ ಸಚಿವೆ ಉಮಾಭಾರತಿಯವರೊಂದಿಗೆ ಬಿಜೆಪಿ ಮುಖಂಡರು ಚರ್ಚೆ ನಡೆಸಿ, ಕಾವೇರಿ ನದಿ ನೀರು ಹಂಚಿಕೆ ಕುರಿತಂತೆ ಮಾಹಿತಿ ನೀಡಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
 
ಮುಂಬರುವ ಎರಡು ಮೂರು ದಿನಗಳಲ್ಲಿ ತಮ್ಮ ತೀರ್ಮಾನ ತಿಳಿಸುವುದಾಗಿ ಸಚಿವೆ ಉಮಾ ಭಾರತಿ, ಬಿಜೆಪಿ ನಾಯಕರಿಗೆ ಭರವಸೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ವೆಬ್ದುನಿಯಾವನ್ನು ಓದಿ