ನವದೆಹಲಿ : ಸಮಸ್ಯೆ ಬಗೆಹರಿದರೆ ಮಾತ್ರ ಏಷ್ಯನ್ ಗೇಮ್ಸ್ನಲ್ಲಿ ಭಾಗವಹಿಸುತ್ತೇನೆ ಎಂದು ಲೈಂಗಿಕ ಪ್ರಕರಣದ ಆರೋಪ ಹೊತ್ತಿರುವ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳಲ್ಲಿ ಒಬ್ಬರಾದ ಸಾಕ್ಷಿ ಮಲಿಕ್ ಸ್ಪಷ್ಟಪಡಿಸಿದ್ದಾರೆ.
ಪ್ರಕರಣದಲ್ಲಿ ಪ್ರತಿದಿನ ಆಗುತ್ತಿರುವ ಬೆಳವಣಿಗೆಯಿಂದ ಮಾನಸಿಕವಾಗಿ ಅನುಭವಿಸುತ್ತಿರುವ ಹಿಂಸೆಯನ್ನು ಯಾರೂ ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲ.
ಪೊಲೀಸರೊಂದಿಗೆ ಪ್ರತಿದಿನ ಈ ವಿಚಾರದ ಬಗ್ಗೆ ಮಾತನಾಡುತ್ತಿದ್ದೇವೆ. ಈ ವಿಚಾರ ಬಗೆಹರಿಯುವ ವರೆಗೂ ಏಷ್ಯನ್ ಗೇಮ್ಸ್ನಲ್ಲಿ ಯಾವ ತಯಾರಿಯನ್ನೂ ನಡೆಸುವುದಿಲ್ಲ ಎಂದು ಅವರು ಹೇಳಿದ್ದಾರೆ.