ನಾನು ಸಚಿವ ಸ್ಥಾನದ ಆಕಾಂಕ್ಷಿ ಹೌದು. ಆದ್ರೆ ಲಾಬಿ ಮಾಡಲ್ಲ ಎಂದ ಶಾಸಕ
ಶಾಸಕ ಎಂ.ಪಿ.ರೇಣುಕಾಚಾರ್ಯ ಅವರು ಕೂಡ ಇಂದು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸಚಿವ ಸ್ಥಾನಕ್ಕೆ ಲಾಬಿ ಮಾಡಲು ದೆಹಲಿಗೆ ಬಂದಿಲ್ಲ. ಸಚಿವ ಸ್ಥಾನ ನೀಡುವುದು, ಬಿಡುವುದು ಸಿಎಂಗೆ ಬಿಟ್ಟ ವಿಚಾರ. ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.