ಹಿಂಸಾಚಾರದಿಂದ ಮನಸ್ಸಿಗೆ ನೋವಾಗಿದೆ: ಪ್ರಧಾನಿ ಮೋದಿ

ಭಾನುವಾರ, 27 ಆಗಸ್ಟ್ 2017 (11:56 IST)
ಡೇರಾ ಸಚಾ ಸೌದಾ ಮುಖ್ಯಸ್ಥ ಬಾಬಾ ರಾಮ್ ರಹೀಮ್  ಬೆಂಬಲಿಗರು ನಡೆಸಿದ ಹಿಂಸಾಚಾರದಿಂದ ಮನಸ್ಸಿಗೆ ತುಂಬಲಾರದಷ್ಟು ನೋವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಇಂದು ನಡೆಸಿದ 35ನೇ ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಿಂಸಾಚಾರ ದೇಶ ಸಹಿಸುವುದಿಲ್ಲ. ಸರಕಾರವೂ ಸಹಿಸುವುದಿಲ್ಲ.ಧರ್ಮದ ಹೆಸರಲ್ಲಿ ಕಾನೂನು ಕೈಗೆತ್ತಿಕೊಳ್ಳುವುದು ಸರಿಯಲ್ಲ ಎಂದು ಬಾಬಾ ರಾಮ್ ರಹೀಮ್ ಬೆಂಬಲಿಗರಿಗೆ ಪರೋಕ್ಷವಾಗಿ ಎಚ್ಚರಿಕೆ ನೀಡಿದರು.
 
ಕಿಡಿಗೇಡಿಗಳು ನಡೆಸಿದ ಹಿಂಸಾಚಾರದಿಂದ 35 ಕ್ಕೂ ಹೆಚ್ಚು ಜನ ಮೃತರಾಗಿದ್ದಾರೆ. 300 ಕ್ಕೂ ಹೆಚ್ಚಿನ ಜನ ಗಾಯಗೊಂಡಿದ್ದಾರೆ. ಹಲವಾರು ವಾಹನಗಳು ಜಖಂಗೊಂಡಿವೆ. ಸಾವಿರಾರು ಕೋಟಿ ರೂಪಾಯಿಗಳ ಆಸ್ತಿ ಪಾಸ್ತಿ ನಷ್ಟವಾಗಿದೆ ಎಂದು ವಿಷಾದ ವ್ಯಕ್ತಪಡಿಸಿದರು.
 
ಧರ್ಮಗಳು ಜನತೆಯನ್ನು ಬೆಸೆಯುವಂತಿರಬೇಕು. ಧರ್ಮದ ಹೆಸರಲ್ಲಿ ಹಿಂಸಾಚಾರ ನಡೆಸುವುದು ಸರಿಯಲ್ಲ. ಇಂತಹ ಉಪದ್ರವಿಗಳಿಗೆ ಸರಕಾರ ತಕ್ಕ ಪಾಠ ಕಲಿಸಲಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಗುಡುಗಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ