ಹೈದರಾಬಾದ್: ಹೈದರಾಬಾದ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ಅವರು ಮತದಾನಕ್ಕೆ ಬಂದ ಮುಸ್ಲಿಂ ಮಹಿಳೆಯರ ಮತದಾರರ ಗುರುತಿನ ಚೀಟಿಗಳನ್ನು ಪರಿಶೀಲಿಸಿದ ವಿಡಿಯೋ ವೈರಲ್ ಬೆನ್ನಲ್ಲೇ ಇದೀಗ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.
ಇದರ ಅನ್ವಯ ಮಾಧವಿ ವಿರುದ್ಧ ಐಪಿಸಿ ಸೆಕ್ಷನ್ 171ಸಿ, 186, 505(1)(ಸಿ) ಮತ್ತು ಪ್ರಜಾಪ್ರತಿನಿಧಿ ಕಾಯ್ದೆಯ ಸೆಕ್ಷನ್ 132ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ವೈರಲ್ ಆಗಿರುವ ವೀಡಿಯೋದಲ್ಲಿ ಬಿಜೆಪಿ ಅಭ್ಯರ್ಥಿಯು ಮತಗಟ್ಟೆಯೊಳಗಿದ್ದ ಮುಸ್ಲಿಂ ಮಹಿಳೆಯರನ್ನು ಬುರ್ಖಾ ತೆಗೆಯುವಂತೆ ಮತ್ತು ಮತದಾರರ ಗುರುತಿನ ಚೀಟಿಯನ್ನು ಪರಿಶೀಲಿಸುವಂತೆ ಕೇಳುತ್ತಿರುವುದನ್ನು ಕಾಣಬಹುದು.
ಈ ಬಗ್ಗೆ ಎನ್‌ಐಎಗೆ ಪ್ರತಿಕ್ರಿಯಿಸಿದ ಬಿಜೆಪಿ ನಾಯಕಿ ಮಾಧವಿ ಅವರು ಮಹಿಳೆಯರ ಗುರುತನ್ನು ಪರಿಶೀಲಿಸಲು ಮಾತ್ರ ವಿನಂತಿಸಿದ್ದಾರೆ ಮತ್ತು ಇದರಲ್ಲಿ ಯಾವುದೇ ತಪ್ಪಿಲ್ಲ ಎಂದು ಹೇಳಿದ್ದಾರೆ.
ಹಿಂದಿನ ದಿನ ಮಾಧವಿ ಲತಾ ಅವರು ತಮ್ಮ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ವ್ಯತ್ಯಾಸಗಳಿವೆ ಎಂದು ಆರೋಪಿಸಿದ್ದರು.
ಹೈದರಾಬಾದ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಮಾಧವಿ ಅವರು ನಾಲ್ಕು ಬಾರಿ ಲೋಕಸಭಾ ಸಂಸದ ಮತ್ತು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಮತ್ತು ಬಿಆರ್‌ಎಸ್‌ನ ಗದ್ದಂ ಶ್ರೀನಿವಾಸ್ ಯಾದವ್ ಅವರ ವಿರುದ್ಧ ಕಣದಲಿದ್ದಾರೆ.