ನವದೆಹಲಿ: ದೇಶದ ಅತಿ ಉದ್ದದ ದೆಹಲಿ-ಮುಂಬೈ ಎಕ್ಸ್ಪ್ರೆಸ್ವೇಯಲ್ಲಿ ದ್ವಿಚಕ್ರ ವಾಹನ ಸವಾರರು ಸಿಕ್ಕಿಬಿದ್ದರೆ 5 ಸಾವಿರ ರೂ. ದಂಡವನ್ನು ವಿಧಿಸಲಾಗುತ್ತದೆ.
ಪ್ರಧಾನಿ ಮೋದಿ ಫೆ.15 ಎಂದು ಮುಂಬೈ- ದೆಹಲಿ ಎಕ್ಸ್ಪ್ರೆಸ್ವೇಯ ಮೊದಲ ಹಂತವಾದ 246 ಕಿ.ಮೀ ಉದ್ದದ ರಸ್ತೆಯನ್ನು ಲೋಕಾರ್ಪಣೆ ಮಾಡಿದ್ದರು. ಲೋಕಾರ್ಪಣೆಯಾದ ಬಳಿಕ ಬೈಕ್ ಸವಾರರು ಮತ್ತು ಸೈಕಲ್ ಸವಾರರು ರಸ್ತೆಯಲ್ಲಿ ಸಂಚರಿಸುತ್ತಿದ್ದಾರೆ.
ಅಷ್ಟೇ ಅಲ್ಲದೇ ರಸ್ತೆ ಪಿಕ್ನಿಕ್ ಸ್ಥಳವಾಗಿ ಬದಲಾಗಿದ್ದು ಗ್ರಾಮಸ್ಥರು ಬೇಲಿಯನ್ನು ಹಾರಿ ಎಕ್ಸ್ಪ್ರೆಸ್ವೇಗೆ ಇಳಿಯುತ್ತಿದ್ದಾರೆ.
ಎಕ್ಸ್ಪ್ರೆಸ್ವೇಯಲ್ಲಿ ಗಂಟೆಗೆ ಗರಿಷ್ಠ 120 ಕಿ.ಮೀ ವೇಗದಲ್ಲಿ ಸಂಚಾರಕ್ಕೆ ಅನುಮತಿ ನೀಡಿದ್ದರೂ ವಾಹನಗಳು ಇದಕ್ಕಿಂತಲೂ ವೇಗದಲ್ಲಿ ಸಂಚರಿಸುತ್ತಿವೆ. ಈ ಹಿನ್ನೆಲೆಯಲ್ಲಿ ಸಂಚಾರ ಪೊಲೀಸರು ಗರಿಷ್ಠ ಮಿತಿಗಿಂತಲೂ ಹೆಚ್ಚಿನ ವೇಗದಲ್ಲಿ ಸಂಚರಿಸಿದ ವಾಹನಗಳಿಗೆ ದಂಡ ವಿಧಿಸುತ್ತಿದ್ದಾರೆ.