ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದ ಕಡು ಬಡವರಿಗೆ ವರ್ಷಕ್ಕೆ 72 ಸಾವಿರ ರೂ. ಆದಾಯ- ರಾಹುಲ್ ಗಾಂಧಿ ಆಶ್ವಾಸನೆ

ಮಂಗಳವಾರ, 26 ಮಾರ್ಚ್ 2019 (10:15 IST)
ನವದೆಹಲಿ : ಈ ಬಾರಿ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ಕಡು ಬಡವರ  ಕುಟುಂಬಕ್ಕೆ ಪ್ರತಿ ತಿಂಗಳು 6 ಸಾವಿರ ರೂಗಳಂತೆ ವರ್ಷಕ್ಕೆ 72 ಸಾವಿರ ರೂ. ಆದಾಯ ನೀಡಲಾಗುತ್ತದೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆಶ್ವಾಸನೆ ನೀಡಿದ್ದಾರೆ.


ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅಧ್ಯಕ್ಷ ರಾಹುಲ್ ಗಾಂಧಿ, ‘ನ್ಯಾಯ’ ಯೋಜನೆ ಜಾರಿಗೆ ತರುವ ಮೂಲಕ ಬಡ ಕುಟುಂಬಕ್ಕೆ ತಿಂಗಳಿಗೆ 6 ಸಾವಿರದಂತೆ, ಅಂದರೆ ವಾರ್ಷಿಕ 72 ಸಾವಿರ ರೂ. ಆದಾಯವನ್ನು ನೀಡಲಾಗುತ್ತದೆ. ಯೋಜನೆಯಿಂದ ದೇಶದ 20% ರಷ್ಟು ಜನರಿಗೆ, ಅಂದರೆ 25 ಕೋಟಿ ಮಂದಿಗೆ ಅನುಕೂಲ ಆಗಲಿದೆ ಎಂದು ತಿಳಿಸಿದ್ದಾರೆ.


ಜಗತ್ತಿನ ಅತಿ ದೊಡ್ಡ ಕನಿಷ್ಠ ಆದಾಯ ಯೋಜನೆ ಇದಾಗುತ್ತದೆ. ಅಲ್ಲದೇ ಗಬ್ಬರ್ ಸಿಂಗ್ ಟ್ಯಾಕ್ಸ್ ಪದ್ಧತಿಯನ್ನು ರದ್ದುಗೊಳಿಸಿ, ಜಿಎಸ್‍ಟಿ ಸರಳೀಕರಣ ಮಾಡಲಾಗುವುದು. ಈ ಮೂಲಕ ದೇಶದ ಸಣ್ಣ ಮತ್ತು ಮಧ್ಯಮ ವರ್ಗದ ಉದ್ಯಮಗಳನ್ನು ಮರು ಸ್ಥಾಪಿಸಿ ಆ ಮೂಲಕ ಉದ್ಯೋಗ ಅವಕಾಶ ಹೆಚ್ಚಿಸಲಾಗುವುದು. ದೇಶದ ಸ್ವಾವಲಂಬಿ ಬದುಕಿನ ಸಾಮಥ್ರ್ಯ ಹೆಚ್ಚಸುವ ಉದ್ದೇಶದಿಂದ ಕೇಂದ್ರ ಸರ್ಕಾರಿ ಕೆಲಸ ಹಾಗೂ ಪಿಎಸ್‍ಯುಎಸ್ ನಲ್ಲಿ ಮಹಿಳೆಯರಿಗೆ 33% ಮೀಸಲಾತಿ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ