ಕೆರೆಗಳಲ್ಲಿ ಇವುಗಳು ಈಜಾಡಿದರೆ ಆಮ್ಲಜನಕ ಹೆಚ್ಚಾಗುತ್ತದೆಯಂತೆ! ಈ ವಿಚಿತ್ರ ಹೇಳಿಕೆ ನೀಡಿದವರು ಯಾರು?

ಬುಧವಾರ, 29 ಆಗಸ್ಟ್ 2018 (12:18 IST)
ತ್ರಿಪುರ : ತ್ರಿಪುರದ ಬಿಜೆಪಿ ಮುಖ್ಯಮಂತ್ರಿ ಬಿಪ್ಲಬ್‌ ಕುಮಾರ್‌ ದೇಬ್‌, ಕೆರೆಗಳಲ್ಲಿ ಬಾತುಕೋಳಿಗಳು ಈಜಾಡಿದರೆ ಆಮ್ಲಜನಕ ಪ್ರಮಾಣ ತನ್ನಿಂತಾನೇ ಏರಿಕೆಯಾಗುತ್ತದೆ ಎಂದು ವಿಚಿತ್ರವಾದ ಹೇಳಿಕೆ ನೀಡಿದ್ದಾರೆ.


ನೀರಮಹಲ್‌’ ಸುತ್ತ ಸೃಷ್ಟಿಸಲಾಗಿರುವ ಕೃತಕ ಸರೋವರ ರುದ್ರಸಾಗರದಲ್ಲಿ ದೋಣಿ ಸ್ಪರ್ಧೆ ಉದ್ಘಾಟಿಸಿ ಮಾತನಾಡಿದ ಅವರು,’ ಕೆರೆಗಳಲ್ಲಿ ಬಾತುಕೋಳಿಗಳು ಈಜಾಡುತ್ತಿದ್ದರೆ, ಅಂತಹ ಕೆರೆಗಳಲ್ಲಿ ಆಮ್ಲಜನಕ ಪ್ರಮಾಣ ತನ್ನಿಂತಾನೇ ವೃದ್ಧಿಯಾಗುತ್ತದೆ. ಇದರಿಂದ ಕೆರೆಗಳಲ್ಲಿರುವ ಮೀನುಗಳಿಗೆ ಹೆಚ್ಚು ಆಮ್ಲಜನಕ ಲಭಿಸುತ್ತದೆ. ಬಾತುಕೋಳಿಗಳ ತ್ಯಾಜ್ಯದಿಂದ ಮೀನುಗಳಿಗೂ ಅನುಕೂಲವಾಗುತ್ತದೆ. ಸಾವಯವ ರೀತಿಯಲ್ಲಿ ಮೀನುಗಳು ಬೆಳೆಯುತ್ತವೆ.


ಆದ ಕಾರಣ 50 ಸಾವಿರ ಬಾತುಕೋಳಿ ಮರಿಗಳನ್ನು ಜನರಿಗೆ ನೀಡುತ್ತೇವೆ. ಇದರಿಂದ ಗ್ರಾಮೀಣ ಆರ್ಥಿಕತೆ ವೃದ್ಧಿಯಾಗುವುದಲ್ಲದೆ, ಕೆರೆಗಳ ಸೌಂದರ್ಯವೂ ಹೆಚ್ಚುತ್ತದೆ ಎಂದು ಹೇಳಿದ್ದಾರೆ. ಆದರೆ ಮುಖ್ಯಮಂತ್ರಿಗಳ ಹೇಳಿಕೆಯನ್ನು ಬೇಜವಾಬ್ದಾರಿತನದ್ದು, ಕೆರೆಗಳಲ್ಲಿ ಬಾತುಕೋಳಿ ಇದ್ದರೆ ಆಮ್ಲಜನಕ ವೃದ್ಧಿಯಾಗುತ್ತದೆ ಎಂಬುದಕ್ಕೆ ವೈಜ್ಞಾನಿಕ ಆಧಾರವಿಲ್ಲ ಎಂದು ತ್ರಿಪುರದಲ್ಲಿ ವೈಜ್ಞಾನಿಕ ಚಿಂತನೆ ಬೆಳೆಸಲು ಯತ್ನಿಸುತ್ತಿರುವ ಜುಕ್ತಿಬಾದ್‌ ವಿಕಾಸ ಮಂಚ್‌ ಸಂಘಟನೆ ತಿಳಿಸಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ