ಅಕ್ರಮ ಆಸ್ತಿ ಗಳಿಕೆ ; ಜಮೀರ್ ಅಹ್ಮದ್ ವಿಚಾರಣೆ ಮುಂದೂಡಿಕೆ

ಮಂಗಳವಾರ, 22 ಆಗಸ್ಟ್ 2023 (09:46 IST)
ನವದೆಹಲಿ : ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ನಡೆಯುತ್ತಿರುವ ತನಿಖೆ ತಡೆ ಕೋರಿ ಸಲ್ಲಿಸಿರುವ ಅರ್ಜಿಯನ್ನು ಅಕ್ಟೋಬರ್ನಲ್ಲಿ ವಿಚಾರಣೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ.
 
ಹೈಕೋರ್ಟ್ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಸಂಜೀವ್ ಖನ್ನಾ ಅವರಿದ್ದ ಪೀಠ ವಿಚಾರಣೆ ಮುಂದೂಡಿಕೆ ಮಾಡಿದೆ.

ಈ ಹಿಂದೆ ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಾಲಯ, ಲೋಕಾಯುಕ್ತ ತನಿಖೆಗೆ ಮಧ್ಯಂತರ ತಡೆ ನೀಡಿತ್ತು. ಇದಕ್ಕೂ ಮುನ್ನ ಲೋಕಾಯುಕ್ತ ನಡೆಸುತ್ತಿದ್ದ ತನಿಖೆಗೆ ತಡೆ ನೀಡಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿತ್ತು. ಈ ಹಿನ್ನಲೆ ಜಮೀರ್ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು.

ಜಮೀರ್ ಅಹ್ಮದ್ ಖಾನ್ 87.5 ಕೋಟಿ ಮೌಲ್ಯದ ಆಸ್ತಿಯನ್ನು ಸಂಗ್ರಹಿಸಿದ್ದಾರೆ. ಅವರ ಆದಾಯ ಮೂಲಕ್ಕಿಂತ 2000%ಕ್ಕಿಂತ ಹೆಚ್ಚಿನ ಆಸ್ತಿ ಹೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಅವರ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಲೋಕಾಯುಕ್ತ ಎಫ್ಐಆರ್ ದಾಖಲಿಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ