ಶಸ್ತ್ರಾಸ್ತ್ರ, ಮದ್ದುಗುಂಡುಗಳ ಅಕ್ರಮ ಖರೀದಿ: ಲಾಲು ಪ್ರಸಾದ್ ವಿರುದ್ಧ ಬಂಧನ ವಾರಂಟ್‌

Sampriya

ಶನಿವಾರ, 6 ಏಪ್ರಿಲ್ 2024 (19:07 IST)
Photo Courtesy X
ನವದೆಹಲಿ:  ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಅಕ್ರಮವಾಗಿ ಖರೀದಿಸಿದ ಪ್ರಕರಣ ಸಂಬಂಧ ಬಿಹಾರದ ಮಾಜಿ ಮುಖ್ಯಮಂತ್ರಿ, ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್‌ ಯಾದವ್ (75) ವಿರುದ್ಧ ಬಂಧನ ವಾರಂಟ್ ಜಾರಿಯಾಗಿದೆ.

ಮಧ್ಯಪ್ರದೇಶದ ಗ್ವಾಲಿಯರ್‌ನ ವಿಶೇಷ ನ್ಯಾಯಾಲಯವು ಇಂದು (ಶನಿವಾರ) ಬಂಧನ ವಾರಂಟ್ ಹೊರಡಿಸಿದೆ.

ಪ್ರಕರಣ ಸಂಬಂಧ ವಿಚಾರಣೆಗೆ ಲಾಲು ಪ್ರಸಾದ್‌ ಯಾದವ್ ಸೇರಿದಂತೆ ಅವರ ಪರ ವಕೀಲರು ನ್ಯಾಯಾಲಯಕ್ಕೆ ಹಾಜರಾಗದ ಕಾರಣ ಬಂಧನ ವಾರಂಟ್ ಹೊರಡಿಸಲಾಗಿದೆ ಎಂದು ತಿಳಿದುಬಂದಿದೆ.


ಗ್ವಾಲಿಯರ್‌ನ ಜೆಎಂಎಫ್‌ಸಿ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರಾದ ಮಹೇಂದ್ರ ಸೈನಿ ಅವರು ಲಾಲು ಯಾದವ್ ವಿರುದ್ಧ ಬಂಧನ ವಾರಂಟ್ ಹೊರಡಿಸಿದ್ದಾರೆ ಎಂದು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಅಭಿಷೇಕ್ ಮೆಹ್ರೋತ್ರಾ ತಿಳಿಸಿದ್ದಾರೆ.

1995-97ರಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಅಧಿಕೃತ ಡೀಲರ್‌ನಿಂದ ಶಸ್ತ್ರಾಸ್ತ್ರ ಹಾಗೂ ಮದ್ದು ಗುಂಡುಗಳನ್ನು ಖರೀದಿಸಿದ ಪ್ರಕರಣ ಇದಾಗಿದೆ.

ಈ ಪ್ರಕರಣದಲ್ಲಿ 23 ಆರೋಪಿಗಳಿದ್ದು, ಇಂದರ್‌ಗಂಜ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಇನ್ನೂ ಆರೋಪಿಗಳ ವಿರುದ್ಧ ಆರೋಪಪಟ್ಟಿ ಸಲ್ಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ