ಆಂಧ್ರಪ್ರದೇಶ ಮತ್ತು ತಮಿಳುನಾಡಿಗೆ ಮತ್ತೊಂದು ಚಂಡಮಾರುತದ ಮುನ್ಸೂಚನೆ ನೀಡಿದ ಐಎಂಡಿ

ಸೋಮವಾರ, 17 ಡಿಸೆಂಬರ್ 2018 (07:36 IST)
ಒಡಿಸ್ಸಾ : ವರ್ಧಾ ಚಂಡಮಾರುತಕ್ಕೆ ತತ್ತರಿಸಿದ್ದ ಆಂಧ್ರಪ್ರದೇಶ ಮತ್ತು ತಮಿಳುನಾಡಿಗೆ ಮತ್ತೊಂದು ಚಂಡಮಾರುತದ ಭೀತಿ ಎದುರಾಗಿದೆ.


ಈಗಾಗಲೇ ವರ್ಧಾ ಚಂಡಮಾರುತಕ್ಕೆ ತತ್ತರಿಸಿದ್ದ ಆಂಧ್ರಪ್ರದೇಶ ಮತ್ತು ತಮಿಳುನಾಡಿಗೆ ರಾಷ್ಟ್ರೀಯ ವಿಪತ್ತು ಪಡೆ 'ಫೆಥಾಯ್' ಚಂಡಮಾರುತದ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಅಪ್ಪಳಿಸಿರುವ 'ಫೆಥಾಯ್' ಚಂಡಮಾರುತ ಈಗ ಆಂಧ್ರ ಮತ್ತು ಚೆನ್ನೈನ ತಮಿಳುನಾಡಿನ ಕರಾವಳಿ ಪ್ರದೇಶಗಳ ಕಡೆಗೆ ಸಾಗುತ್ತಿದೆ. ಈ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮಕೈಗೊಳ್ಳುವಂತೆ ರಾಷ್ಟ್ರೀಯ ವಿಪತ್ತು ಪಡೆ ಎಚ್ಚರಿಕೆ ನೀಡಿದೆ.


ದಕ್ಷಿಣ ಆಂಧ್ರಪ್ರದೇಶ, ಉತ್ತರ ತಮಿಳುನಾಡು ಮತ್ತು ಪುದುಚೇರಿ ಕರಾವಳಿಯಲ್ಲಿ 45-55 ಕಿ.ಮೀ. ಮತ್ತು 65 ಕಿ.ಮೀ. ವೇಗದಲ್ಲಿ ಚಂಡಮಾರುತ ಧಾವಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.



 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ