ತಿರುವನಂತಪುರಂ: ಸತತ ಬಿಸಿಲಿನಿಂದ ಕಂಗೆಟ್ಟಿದ್ದ ಜನತೆಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಕೇರಳದ ಕೆಲವು ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ. ಕಳೆದ ಕೆಲವು ದಿನಗಳಿಂದ ತಾಪಮಾನ ವಿಪರೀತ ಏರಿಕೆಯಾಗಿತ್ತು. ಇದೀಗ ಕೇರಳೀಯರಿಗೆ ನೆಮ್ಮದಿ ತರುವ ಸುದ್ದಿಯನ್ನು ಹವಾಮಾನ ಇಲಾಖೆ ನೀಡಿದೆ.
ಕೇರಳದ ತಿರುವನಂತಪುರಂ, ಪಟ್ಟಣಂತಿಟ್ಟ, ಕೊಲ್ಲಂ, ಆಲಪ್ಪುಳ, ಕೊಟ್ಟಾಯಂ ಮತ್ತು ಇಡುಕ್ಕಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದಲ್ಲದೆ ತ್ರಿಶ್ಶೂರ್, ಪಾಲಕ್ಕಾಡ್ ಮತ್ತು ಮಲಪ್ಪುರಂ ಜಿಲ್ಲೆಗಳಲ್ಲೂ ತುಂತುರು ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
ಕೇರಳದಲ್ಲಿ ಇಂದು ತಾಪಮಾನ ಗರಿಷ್ಠ 32 ಡಿಗ್ರಿ ಮತ್ತು ಕನಿಷ್ಠ 26 ಡಿಗ್ರಿಯವರೆಗಿದೆ. ಇಂದು ಮಾತ್ರವಲ್ಲ, ನಾಳೆಯೂ ಈ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.