ಭಾರತದ ಆರ್ಥಿಕತೆ ಮೇಲೆ ಉಕ್ರೇನ್ ಪರಿಣಾಮ

ಗುರುವಾರ, 24 ಮಾರ್ಚ್ 2022 (11:01 IST)
ಕೋವಿಡ್ ಸೋಂಕಿನಂತಹ ತುರ್ತು ಪರಿಸ್ಥಿತಿ ನಡುವೆಯೂ ದೇಶದ ಅರ್ಥ ವ್ಯವಸ್ಥೆ ಸದೃಢವಾಗಿ ನಿಲ್ಲಲು ಪ್ರಧಾನಿ ನರೇಂದ್ರ ಮೋದಿ  ಅವರು ಆತ್ಮನಿರ್ಭರ ತತ್ವದಡಿ ಕೈಗೊಂಡ ಕ್ರಮಗಳೇ ಪ್ರಮುಖ ಕಾರಣ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪ್ರತಿಪಾದಿಸಿದ್ದಾರೆ.
 
ಆದರೆ, ಪ್ರಸಕ್ತ ನಡೆಯುತ್ತಿರುವ ಉಕ್ರೇನ್-ರಷ್ಯಾ ಯುದ್ಧದಿಂದ ಭಾರತದ ಆರ್ಥಿಕತೆ ಮೇಲೆ ಪರಿಣಾಮ ಬೀರಲಿದೆ ಎಂದೂ ಅವರು ಹೇಳಿದ್ದಾರೆ. ರಾಜ್ಯ ಬಿಜೆಪಿಯಿಂದ ನಗರದ ಖಾಸಗಿ ಹೋಟೆಲ್ನಲ್ಲಿ ಮಂಗಳವಾರ ಆಯೋಜಿಸಿದ್ದ ‘ಆತ್ಮನಿರ್ಭರ ಅರ್ಥ ವ್ಯವಸ್ಥೆ ಭಾರತ’ ವಿಷಯ ಕುರಿತ ಸಂವಾದವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಪ್ರಧಾನಿ ಮೋದಿ ಅವರು ಪ್ರತಿ ವಿಚಾರದಲ್ಲೂ ಬದ್ಧತೆ ಹೊಂದಿದ್ದಾರೆ. ಯಾವುದೇ ಯೋಜನೆ ಘೋಷಣೆಗೆ ಮಾತ್ರ ಸೀಮಿತಗೊಳಿಸದೆ ಅನುಷ್ಠಾನಗೊಳಿಸಿದ್ದಾರೆ. ಮೋದಿ ಅವರ ನಾಯಕತ್ವದಲ್ಲಿ ದೇಶ ಅಭಿವೃದ್ಧಿ ಪಥದಲ್ಲಿ ಮುನ್ನುಗುತ್ತಿದೆ. ಆಡಳಿತದಲ್ಲಿ ಪಾರದರ್ಶಕತೆ ಬಂದಿದೆ. ಭ್ರಷ್ಟಾಚಾರಕ್ಕೆ ಕಡಿವಾಣ ಬಿದ್ದಿದೆ. ಸಮಾಜದ ಕಟ್ಟಡ ಕಡೆಯ ವ್ಯಕ್ತಿಗೂ ಸರ್ಕಾರದ ಯೋಜನೆಗಳು ತಲುಪುತ್ತಿವೆ.

ಅಡುಗೆ ಅನಿಲ, ಮನೆ ಮನೆಗೂ ಶುದ್ಧ ಕುಡಿಯುವ ನೀರು, ವಿದ್ಯುತ್ ಸಂಪರ್ಕ ಕಲ್ಪಿಸುವಲ್ಲಿ ನಿರೀಕ್ಷೆಗೂ ಮೀರಿದ ಸಾಧನೆ ಸಾಧ್ಯವಾಗಿದೆ. ಅಭಿವೃದ್ಧಿ ವಿಚಾರದಲ್ಲಿ ಯಾರೊಬ್ಬರೂ ಮೋದಿ ಅವರ ಬದ್ಧತೆ ಬಗ್ಗೆ ಪ್ರಶ್ನೆ ಮಾಡುವಂತಿಲ್ಲ’ ಎಂದರು. ‘ಕೊರೋನಾ ಸೋಂಕಿನಿಂದ ಇಡೀ ಜಗತ್ತು ತತ್ತರಿಸಿತು.

ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಆತ್ಮನಿರ್ಭರ ತತ್ವದಡಿ ಜಗತ್ತಿನ ಗಮನ ಸೆಳೆದರು. ಕಡಿಮೆ ಅವಧಿಯಲ್ಲಿ ಸ್ವದೇಶಿ ಪಿಪಿಇ ಕಿಟ್, ಮಾಸ್ಕ್, ವೈದ್ಯಕೀಯ ಉಪಕರಣಗಳು, ಔಷಧಿಗಳ ತಯಾರಿಕೆಗೆ ಉತ್ತೇಜನ ನೀಡಿದರು.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ