ಸುಪ್ರೀಂಕೋರ್ಟ್ ಮಹತ್ವದ ತೀರ್ಪು; ಹೆಣ್ಣು ಮಕ್ಕಳಿಗೆ ಸಮಾನ ಆಸ್ತಿ ಹಕ್ಕು

ಭಾನುವಾರ, 4 ಫೆಬ್ರವರಿ 2018 (13:29 IST)
ನವದೆಹಲಿ: ಪುರುಷರು ಮತ್ತು ಮಹಿಳೆಯರ ಮಧ್ಯೆ ಸಮಾನತೆ ಕಾಯ್ದು ಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂಕೋರ್ಟ್ ಮಹತ್ವದ ತೀರ್ಪೊಂದನ್ನು ಹೊರಡಿಸಿದೆ. ಹಿಂದೂ ಉತ್ತರಾಧಿಕಾರ (ತಿದ್ದುಪಡಿ) ಕಾಯ್ದೆ 2005, ಪಿತ್ರಾರ್ಜಿತ ಆಸ್ತಿಯಲ್ಲಿ ಗಂಡು ಮತ್ತು ಹೆಣ್ಣು ಮಕ್ಕಳಿಗೆ ಸಮಾನ ಹಕ್ಕನ್ನು ನೀಡುತ್ತದೆ. 2005ರಲ್ಲಿ ಕಾಯ್ದೆಗೆ ತಿದ್ದುಪಡಿ ಮಾಡುವುದಕ್ಕೆ ಮೊದಲು ಹುಟ್ಟಿದವರು
 
ಅಥವಾ ನಂತರ ಹುಟ್ಟಿದವರು ಎಂಬ ಯಾವುದೇ ತಾರತಮ್ಯಕ್ಕೆ ಇಲ್ಲಿ ಅವಕಾಶ ಇಲ್ಲ. ಒಡಹುಟ್ಟಿದವರು ಎಂಬ ಅಂಶವೇ ಗಂಡು ಮತ್ತು ಹೆಣ್ಣು ಮಕ್ಕಳಿಬ್ಬರಿಗೂ ಸಮಾನ ಹಕ್ಕನ್ನು ನೀಡುತ್ತದೆ ಎಂದು ಸುಪ್ರೀಂ ಕೋರ್ಟ್‌ ಸ್ಪಷ್ಟಪಡಿಸಿದೆ.


2005ಕ್ಕೂ ಮೊದಲು ಮಹಿಳೆ ಜನಿಸಿದ್ದಳು ಎಂಬ ಕಾರಣಕ್ಕೆ ತವರು ಮನೆ ಆಸ್ತಿಯಲ್ಲಿ ಪಾಲು ನೀಡದೇ ಇರಬಾರದು ಎಂದು ಸುಪ್ರೀಂಕೋರ್ಟ್ ಹೇಳಿದೆ. ತಂದೆಯ ಆಸ್ತಿಯಲ್ಲಿ ಸಮಾನ ಪಾಲು ಆಗ್ರಹಿಸಿ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದ ಕರ್ನಾಟಕದ ಬಾಗಲಕೋಟೆಯ ಇಬ್ಬರು ಸೋದರಿಯರ ಪ್ರಕರಣದಲ್ಲಿ ಪೀಠ ಈ ತೀರ್ಪು ನೀಡಿದೆ.  ಈ ಸಂಬಂಧ ರಾಜ್ಯ ಹೈಕೋರ್ಟ್‌ ಆದೇಶ ತಳ್ಳಿಹಾಕಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ