ಪ್ರಧಾನಿ ಮೋದಿ ಸರಕಾರದಲ್ಲಿ ಭಾರತ ಸುರಕ್ಷಿತ: ಮೋಹನ್ ಭಾಗವತ್

ಸೋಮವಾರ, 25 ಜುಲೈ 2016 (14:23 IST)
ಪ್ರಧಾನಮಂತ್ರಿ ನರೇಂದ್ರ ಮೋದಿ ಸರಕಾರದಲ್ಲಿ ಭಾರತ ಸುರಕ್ಷಿತವಾಗಿದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಅಧ್ಯಕ್ಷ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.
 
ಸಾವಿರಾರು ಸ್ವಯಂ ಸೇವಕರು ಸರಕಾರದ ಪ್ರಮುಖ ಹುದ್ದೆಗಳಲ್ಲಿರುವುದರಿಂದ ಭಾರತ ಸುರಕ್ಷಿತವಾಗಿದೆ.ಯಾವುದೇ ಕಾರಣಕ್ಕೂ ಆತಂಕಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ. 
 
ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರಕಾರ ಅಭಿವೃದ್ಧಿಯತ್ತ ದಾಪುಗಾಲು ಹಾಕಲು ಮುಂದುವರಿಸಿದ್ದು, ಅದರ ಫಲಿತಾಂಶಕ್ಕಾಗಿ ನಿರೀಕ್ಷಿಸಬೇಕಾಗುತ್ತದೆ ಎಂದರು.
 
ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಕೇವಲ ತಮ್ಮ ಹೊಗಳಿಕೆಯನ್ನು ಸರಕಾರಕ್ಕೆ ಮೀಸಲಾಗಿಡಲಿಲ್ಲ. ಪ್ರಧಾನಿ ಮೋದಿಯವರಿಂದ ತುಂಬಾ ಪ್ರಭಾವಿತರಾಗಿರುವುದಾಗಿ ತಿಳಿಸಿದ್ದಾರೆ. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ