ದೇಶದ ಅಂತರಿಕ ಭದ್ರತಾ ವ್ಯವಸ್ಥೆಯಲ್ಲಿ ಸುಧಾರಣೆ: ರಾಜನಾಥ್ ಸಿಂಗ್

ಶನಿವಾರ, 3 ಜೂನ್ 2017 (12:42 IST)
ಜಮ್ಮು ಕಾಶ್ಮಿರದ ಕಾನೂನು ಪರಿಸ್ಥಿತಿ ಸುಧಾರಿಸುತ್ತಿದೆ. ದೇಶದ ಅಂತರಿಕ ಭದ್ರತಾ ವ್ಯವಸ್ಥೆಯಲ್ಲಿ ಸುಧಾರಣೆಯಾಗುತ್ತಿದೆ ಎಂದು ಕೇಂದ್ರ ಗೃಹ ಖಾತೆ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
 
ಮೋದಿ ಸರಕಾರ ಮೂರು ವರ್ಷಗಳು ಪೂರೈಸಿದ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಕ್ಸಲ್ ಹಾವಳಿಯಲ್ಲಿ ಶೇ.25 ರಷ್ಟು ಕಡಿಮೆಯಾಗಿದೆ.ಭ್ರಷ್ಟಾಚಾರ ಪ್ರಮಾಣದಲ್ಲೂ ಇಳಿಮುಖವಾಗಿದೆ ಎಂದು ತಿಳಿಸಿದ್ದಾರೆ.
 
ಐಸಿಸ್ ಬಗ್ಗೆ ಸಹಾನುಭೂತಿ ಹೊಂದಿದವರನ್ನು ಬಂಧಿಸಲಾಗುತ್ತಿದೆ. ಪಾಕಿಸ್ತಾನದಿಂದ ಹಣಕಾಸಿನ ನೆರವು ಪಡೆಯುತ್ತಿರುವ ಹುರಿಯತ್ ಬೆಂಬಲಿಗರ ನಿವಾಸಗಳ ಮೇಲೆ ದಾಳಿ ನಡೆಸಲಾಗಿದೆ. ಜಮ್ಮು ಕಾಶ್ಮಿರದಲ್ಲಿ 14 ಸ್ಥಳಗಳಲ್ಲಿ ದಾಳಿ ನಡೆಸಲಾಗಿದೆ ಎಂದರು.
 
ದೆಹಲಿಯಲ್ಲಿ ಕೂಡಾ 8 ಸ್ಥಳಗಳ ಮೇಲೆ ದಾಳಿ ನಡೆಸಲಾಗಿದ್ದು, ಹುರಿಯತ್ ನಾಯಕರಿಗೆ ಪಾಕಿಸ್ತಾನದಿಂದ ಬರುತ್ತಿದ್ದ ಹಣಕಾಸಿನ ನೆರವಿಗೆ ಕಡಿವಾಣ ಹಾಕಲಾಗಿದೆ ಎಂದು ಕೇಂದ್ರ ಗೃಹ ಖಾತೆ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ.  
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ