ಪಾಕಿಸ್ತಾನದ ವಾಯುಮಾರ್ಗದಲ್ಲಿ ಭಾರತೀಯ ವಿಮಾನಗಳ ಹಾರಾಟಕ್ಕೆ ನಿಷೇಧ ಹೇರಿದ ಇಮ್ರಾನ್ ಖಾನ್

ಬುಧವಾರ, 28 ಆಗಸ್ಟ್ 2019 (10:36 IST)
ನವದೆಹಲಿ : ಪಾಕಿಸ್ತಾನದ ವಾಯುಮಾರ್ಗದಲ್ಲಿ ಭಾರತೀಯ ವಿಮಾನಗಳ ಹಾರಾಟಕ್ಕೆ ಸಂಪೂರ್ಣ ನಿಷೇಧ ಹೇರಲು ಪ್ರಧಾನಿ ಇಮ್ರಾನ್ ಖಾನ್ ನಿರ್ಧರಿಸಿದ್ದಾರೆ  ಎಂಬುದಾಗಿ ತಿಳಿದುಬಂದಿದೆ.
ಈ ಹಿಂದೆ ಪಾಕಿಸ್ತಾನ ತನ್ನ ದೇಶದ ವಾಯು ಮಾರ್ಗದಲ್ಲಿ ಭಾರತೀಯ ವಿಮಾನಗಳು ಹಾರದಂತೆ ಸಂಪೂರ್ಣ ನಿಷೇಧ ಹೇರಿತ್ತು. ಈ ನಿಷೇಧವನ್ನು ಜುಲೈ 16ರಂದು ತೆರವುಗೊಳಿಸಲಾಗಿತ್ತು. ಆದರೆ ಇದೀಗ ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ 370ನೇ ವಿಧಿಯನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದ ಬಳಿಕ ಎರಡು ದೇಶಗಳ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಈ ಹಿನ್ನೆಲೆಯಲ್ಲಿ ಪಾಕಿಸ್ತಾನ ಭಾರತದ ಜೊತೆ ಇದ್ದ ವಾಣಿಜ್ಯ ವ್ಯವಹಾರ, ಭಾರತಕ್ಕೆ ಪಾಕಿನಿಂದ ತೆರಳುವ ಬಸ್ಸುಗಳು ಹಾಗೂ ರೈಲು ಸೇವೆಯನ್ನು ಆಗಸ್ಟ್ 5ರಿಂದ ಸ್ಥಗಿತಗೊಳಿಸಿದೆ.


ಇದೀಗ ಪಾಕಿಸ್ತಾನ ವಾಯುಮಾರ್ಗದಲ್ಲಿ ಭಾರತೀಯ ವಿಮಾನಗಳ ಹಾರಾಟಕ್ಕೆ ಸಂಪೂರ್ಣ ನಿಷೇಧ ಹೇರಲು ಪ್ರಧಾನಿ ಇಮ್ರಾನ್ ಖಾನ್ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಿದ್ದಾರೆ ಎಂದು ಪಾಕಿಸ್ತಾನ ವಿಜ್ಞಾನ ಮತ್ತು ತಂತ್ರಜ್ಞಾನದ ಸಚಿವ ಫವಾದ್ ಹುಸೇನ್ ಅವರು ಟ್ವೀಟ್ ಮಾಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ