ದೆಹಲಿ ಮುನ್ಸಿಪಲ್ ಚುನಾವಣೆಯಲ್ಲಿ ಮತಯಂತ್ರ ಬಳಕೆ ಬೇಡ: ಕೇಜ್ರಿವಾಲ್

ಮಂಗಳವಾರ, 14 ಮಾರ್ಚ್ 2017 (14:26 IST)
ದೆಹಲಿ ಮುನ್ಸಿಪಲ್ ಕಾರ್ಪೋರೇಶನ್‌ ಚುನಾವಣೆಯಲ್ಲಿ ಮತಯಂತ್ರಗಳ ಬಳಕೆ ಬೇಡ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೇಂದ್ರ ಚುನಾವಣೆ ಆಯೋಗಕ್ಕೆ ಮನವಿ ಮಾಡಿದ್ದಾರೆ.
 
ಕೇಂದ್ರ ಚುನಾವಣೆ ಆಯೋಗ ದೆಹಲಿ ಮುನ್ಸಿಪಲ್ ಕಾರ್ಪೋರೇಶನ್‌ ಚುನಾವಣೆಗಾಗಿ ಇಂದು ದಿನಾಂಕ ಪ್ರಕಟಿಸುವ ಹಿನ್ನೆಲೆಯಲ್ಲಿ ಸಿಎಂ ಕೇಜ್ರಿವಾಲ್, ಮತಯಂತ್ರಗಳನ್ನು ಬಳಸದಂತೆ ಆಯೋಗಕ್ಕೆ ಮನವಿ ಮಾಡಿದ್ದಾರೆ.
 
ಪಂಚರಾಜ್ಯಗಳ ಚುನಾವಣೆಯಲ್ಲಿ ಮತಯಂತ್ರಗಳ ದುರ್ಬಳಕೆ ಮಾಡಲಾಗಿದೆ ಎನ್ನುವ ಆರೋಪಗಳ ಹಿನ್ನೆಲೆಯಲ್ಲಿ ದೆಹಲಿ ಮುನ್ಸಿಪಲ್ ಚುನಾವಣೆಯಲ್ಲಿ ಮತಯಂತ್ರಗಳ ಬಳಕೆ ಬೇಡ ಎನ್ನುವುದು ಆಮ್ ಆದ್ಮಿ ಪಕ್ಷದ ಬೇಡಿಕೆಯಾಗಿದೆ.
 
ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಮಾಯಾವತಿ, ಉತ್ತರಪ್ರದೇಶದ ವಿಧಾನಸಭೆ ಚುನಾವಣೆಯಲ್ಲಿ ಮತಯಂತ್ರಗಳನ್ನು ದುರ್ಬಳಕೆ ಮಾಡಲಾಗಿದೆ ಎಂದು ಬಹಿರಂಗವಾಗಿ ಆರೋಪಿಸಿದ್ದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ