ಜೆಎನ್‌ಯು ಮತ್ತೆ ಸುದ್ದಿಯಲ್ಲಿದೆ. ವಿಶ್ವ ವಿದ್ಯಾಲಯದ ಎಮ್ಎಸ್ಸಿ ವಿದ್ಯಾರ್ಥಿ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ವಿಶ್ವವಿದ್ಯಾಲಯದ ಉಪ ಕುಲಪತಿ ಎಮ್.ಜೆ ಕುಮಾರ್, ಇತರ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಕೂಡಿ ಹಾಕಿ ವಿದ್ಯಾರ್ಥಿ ಪತ್ತೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ವಿದ್ಯಾರ್ಥಿಗಳು ಅಹೋ ರಾತ್ರಿ ಪ್ರತಿಭಟನೆಯನ್ನು ಕೈಗೊಂಡಿದ್ದಾರೆ.
ವಿಶ್ವವಿದ್ಯಾಲಯದ ಎಮ್‌ಎಸ್ಸಿ ವಿದ್ಯಾರ್ಥಿ ನಜೀಬ್ ಅಹ್ಮದ್ ಕಳೆದ ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದಾನೆ. ಈ ಕುರಿತು ಆತ ತಾಯಿ ಪೊಲೀಸ್ ಠಾಣೆಯಲ್ಲಿ ದೂರನ್ನು ಸಹ ನೀಡಿದ್ದಾರೆ. ಆತ ನಾಪತ್ತೆಯಾಗುವ ಮೊದಲ ದಿನ ವಿಶ್ವವಿದ್ಯಾಲಯದಲ್ಲಿ ಗಲಾಟೆ ನಡೆದಿತ್ತು. ಈ ಹಿನ್ನೆಲೆಯಲ್ಲಿ ಆತ ನಾಪತ್ತೆಯಾಗಿದ್ದಾನೆಂದು ಹೇಳಲಾಗುತ್ತಿದೆ. ಆತನ ಪತ್ತೆಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ಪ್ರತಿಭಟನೆಯನ್ನು ಕೈಗೊಂಡಿದ್ದಾರೆ.