ಮಧ್ಯಪ್ರದೇಶದಲ್ಲಿ ಪ್ರತಿನಿತ್ಯ ಲಂಚಬಾಕ ಅಧಿಕಾರಿ ಲೋಕಾಯುಕ್ತ ಬಲೆಗೆ

ಭಾನುವಾರ, 3 ಜನವರಿ 2016 (13:30 IST)
ಆಘಾತಕಾರಿ ವಿಷಯವೆಂದರೆ ಮಧ್ಯಪ್ರದೇಶದಲ್ಲಿ ಪ್ರತಿ ನಿತ್ಯ ಒಬ್ಬ ಲಂಚಬಾಕ ಅಧಿಕಾರಿ ಲೋಕಾಯುಕ್ತರ ಬಲೆಗೆ ಬೀಳುತ್ತಿದ್ದಾನೆ ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.
 
ರಾಜ್ಯದಲ್ಲಿ ಭ್ರಷ್ಟಾಚಾರ ಮೀತಿ ಮೀರಿದ್ದು,ಭ್ರಷ್ಟಾಚಾರ ಪ್ರಕರಣಗಳು ಪತ್ತೆಯಾಗದ ದಿನವೇ ಇಲ್ಲ ಎಂದು ಲೋಕಾಯುಕ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
 
ಬಿಜೆಪಿ ಅಧಿಕಾರವಿರುವ ಗುಜರಾತ್‌ ರಾಜ್ಯದಲ್ಲಿಯೂ ಭ್ರಷ್ಟಾಚಾರದಲ್ಲಿ ಹೆಚ್ಚಳವಾಗಿದೆ, ಗುಜರಾತಿ ಜನತೆ ಸತ್ಯವನ್ನು ಸ್ವೀಕರಿಸಿ, ಅಧಿಕಾರಿಗಳಿಗೆ ಲಂಚ ನೀಡಿ ತಮ್ಮ ಕೆಲಸಗಳನ್ನು ಪೂರ್ಣಗೊಳಿಸುತ್ತಾರೆ ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ.
 
ಅಧಿಕೃತ ಅಂಕಿ ಸಂಖ್ಯೆಗಳ ಪ್ರಕಾರ ಕಳೆದ 2015ರಲ್ಲಿ 411 ಅಧಿಕಾರಿಗಳು ಲಂಚ ಪಡೆಯುವಾಗ ಬಲೆಗೆ ಬಿದ್ದಿದ್ದಾರೆ. ಕಳೆದ ವರ್ಷಕ್ಕೆ ಹೋಲಿಸಿದಲ್ಲಿ ಭ್ರಷ್ಟಾಚಾರದ ಪ್ರಮಾಣದಲ್ಲಿ ಶೇ.5 ರಷ್ಟು ಹೆಚ್ಚಳವಾಗಿದೆ.
 
ಕಳೆದ 2014ರಲ್ಲಿ 390 ಅಧಿಕಾರಿಗಳು ಲಂಚ ಸ್ವೀಕರಿಸುವಾಗ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ. 2013ರಲ್ಲಿ 359 ಅಧಿಕಾರಿಗಳು ಲಂಚದ ಬಲೆಗೆ ಸಿಕ್ಕುಬಿದ್ದಿದ್ದಾರೆ ಎಂದು ಲೋಕಾಯುಕ್ತ ಕಚೇರಿ ಹೊರಡಿಸಿದ ವರದಿಯಲ್ಲಿ ಉಲ್ಲೇಖವಾಗಿದೆ
 
ಅಧಿಕಾರಗಳು ಕೇವಲ ಲಂಚ ಸ್ವೀಕರಿಸುವುದಕ್ಕೆ ಮಾತ್ರ ಖ್ಯಾತರಾಗಿಲ್ಲ. ತಮ್ಮ ಅಧಿಕಾರದ ಸ್ಥಾನವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಅಧಿಕಾರ ದುರುಪಯೋಗಪಡಿಸಿಕೊಂಡ 197 ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಾಗಿವೆ ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ. 

ವೆಬ್ದುನಿಯಾವನ್ನು ಓದಿ