ಕರಾಟೆ ಹೇಳಿಕೊಡುವ ನೆಪದಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಶಿಕ್ಷಕ!

ಗುರುವಾರ, 11 ಅಕ್ಟೋಬರ್ 2018 (07:04 IST)
ಪಾಟ್ನಾ : ಬಿಹಾರದ ಪಾಟ್ನಾದಲ್ಲಿ ವ್ಯಕ್ತಿಯೊಬ್ಬ  ಕರಾಟೆ ಹೇಳಿಕೊಡುವುದಾಗಿ ಸುಳ‍್ಳುಹೇಳಿ 3 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಘಟನೆ ಬೆಳಕಿಗೆ ಬಂದಿದೆ.

ಮುಖೇಶ್ ಕುಮಾರ್ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಕರಾಟೆ ಶಿಕ್ಷಕ. ತನ್ನ ಸಂಬಂಧಿಕರ ಮನೆಗೆ ಹೋಗಿದ್ದ ಬಾಲಕಿ ಮರಳಿ ಮನೆಗೆ ಬರುತ್ತಿರುವಾಗ ಎದುರಿಗೆ ಬಂದ ಕರಾಟೆ ಶಿಕ್ಷಕ ಮುಖೇಶ್ ಕುಮಾರ್ ಬಾಲಕಿಗೆ  ಕರಾಟೆ ಹೇಳಿಕೊಡುವುದಾಗಿ ಹೇಳಿ ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿ ಪರಾರಿಯಾಗಿದ್ದಾನೆ.

 

ಪ್ರಜ್ಞಾಹೀನ ಸ್ಥಿತಿಯಲ್ಲಿ ಸಿಕ್ಕಿದ ಬಾಲಕಿಯನ್ನು ದಾನಪುರದ ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ