ಮದುವೆಯಲ್ಲಿ ಕುಡಿದ ನಶೆಯಲ್ಲಿದ್ದ ವ್ಯಕ್ತಿ ಹಾರಿಸಿದ ಗುಂಡಿಗೆ ಬಲಿಯಾಗಿದ್ಯಾರು ಗೊತ್ತಾ?
ಸೋಮವಾರ, 25 ಫೆಬ್ರವರಿ 2019 (06:24 IST)
ಪಾಟ್ನಾ : ಮದುವೆ ಕಾರ್ಯಕ್ರಮವೊಂದರಲ್ಲಿ ಕುಡಿದ ನಶೆಯಲ್ಲಿ ವ್ಯಕ್ತಿಯೊಬ್ಬ ಹಾರಿಸಿದ ಗುಂಡು ವಿಡಿಯೋಗ್ರಾಫರ್ ದೇಹಕ್ಕೆ ತಗುಲಿ ಆತ ಸಾವನಪ್ಪಿದ ಘಟನೆ ಪಾಟ್ನಾದ ಫುಲವಾರಿ ಕ್ಷೇತ್ರದಲ್ಲಿ ನಡೆದಿದೆ.
ಮದುವೆ ಕಾರ್ಯಕ್ರಮದಲ್ಲಿ ಆರ್ಕೆಸ್ಟ್ರಾ ನಡೆಯುತ್ತಿತ್ತು. ಆ ವೇಳೆ ವ್ಯಕ್ತಿಯೊಬ್ಬ ಮದ್ಯ ಸೇವನೆ ಮಾಡಿ ನಶೆಯಲ್ಲಿ ಗುಂಡು ಹಾರಿಸಿದ್ದಾನೆ. ಆಗ ಗುಂಡು ವಿಡಿಯೋಗ್ರಾಫರ್ ದೇಹಕ್ಕೆ ತಾಗಿದೆ. ತಕ್ಷಣ ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದರೂ ಕೂಡ ಚಿಕಿತ್ಸೆ ಫಲಕಾರಿಯಾಗದೆ ಆತ ಸಾವನ್ನಪ್ಪಿದ್ದಾನೆ.
ಈ ಘಟನೆಯ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ವಿಚಾರಣೆ ಶುರು ಮಾಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.