ರಾಷ್ಟ್ರ ರಾಜಧಾನಿಯಲ್ಲಿ ಹೆಚ್ಚಿದ ವಾಯುಮಾಲಿನ್ಯ: ಅರ್ಧದಷ್ಟು ಸರ್ಕಾರಿ ನೌಕರರಿಗೆ ವರ್ಕ್ ಫ್ರಂ ಹೋಂ

Sampriya

ಬುಧವಾರ, 20 ನವೆಂಬರ್ 2024 (14:17 IST)
Photo Courtesy X
ನವದೆಹಲಿ: ದೆಹಲಿಯ ವಾಯುಮಾಲಿನ್ಯವನ್ನು ಅಲ್ಲಿನ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಸರ್ಕಾರಿ ಕಚೇರಿಗಳ ಅರ್ಧದಷ್ಟು ಸಿಬ್ಬಂದಿ ಮನೆಯಿಂದಲೇ ಕೆಲಸ ಮಾಡಲು ಸರ್ಕಾರ ಸೂಚನೆ ನೀಡಿದೆ.

ಪರಿಸರ ಸಚಿವ ಗೋಪಾಲ್ ರಾಯ್‌ ಅವರು ಈ ಸಂಬಂಧ ಎಕ್ಸ್‌/ಟ್ವಿಟರ್‌ನಲ್ಲಿ ಬುಧವಾರ ಪೋಸ್ಟ್‌ ಹಂಚಿಕೊಂಡಿದ್ದು, ಮಾಲಿನ್ಯ ನಿಯಂತ್ರಿಸುವ ಸಲುವಾಗಿ, ಸರ್ಕಾರಿ ನೌಕರರಿಂದ ಮನೆಯಿಂದಲೇ ಕೆಲಸ ಮಾಡಿಸಲು ನಿರ್ಧರಿಸಲಾಗಿದೆ. ಶೇ 50ರಷ್ಟು ಸಿಬ್ಬಂದಿ ಮನೆಯಿಂದಲೇ ಕೆಲಸ ಮಾಡಲಿದ್ದಾರೆ. ನಿಯಮ ಜಾರಿಗೆ ಸಂಬಂಧಿಸಿಂತೆ ಮಧ್ಯಾಹ್ನ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಲಾಗುವುದು ಎಂದಿದ್ದಾರೆ.  

ದೆಹಲಿಯಲ್ಲಿ ವಾಯುಮಾಲಿನ್ಯ ಪರಿಸ್ಥಿತಿ ಬಿಗಡಾಯಿಸುತ್ತಿದೆ. ಗಾಳಿಯ ಗುಣಮಟ್ಟ ತೀವ್ರ ಕುಸಿತ ಕಂಡಿದ್ದರೂ ಕಠಿಣ ಕ್ರಮಗಳನ್ನು ಜಾರಿಗೊಳಿಸುವಲ್ಲಿ ವಿಳಂಬ ಏಕಾಯಿತು ಎಂದು ಸುಪ್ರೀಂ ಕೋರ್ಟ್‌ ಸೋಮವಾರ ದೆಹಲಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು.

ದೆಹಲಿಯಲ್ಲಿ ವಾಯು ಗುಣಮಟ್ಟ ಸೂಚ್ಯಂಕವು  ಇಂದು ಬೆಳಿಗ್ಗೆ 424ರಷ್ಟಿದೆ. ಮಂಗಳವಾರ ಬೆಳಿಗ್ಗೆ 484 ಅಂಶದಷ್ಟಿತ್ತು. ಇದು ಈ ಋತುವಿನ ಅತ್ಯಂತ ಕೆಟ್ಟ ಮಟ್ಟದ್ದಾಗಿದೆ. ಕೆಲವು ಪ್ರದೇಶಗಳಲ್ಲಿ ಎಕ್ಯೂಐ, 500ರ ಗಡಿಯನ್ನೂ ದಾಟಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ