ಪಾಕ್‌, ಭಾರತ ನಡುವೆ ಹೆಚ್ಚಿದ ಉದ್ವಿಗ್ನತೆ: ಚೀನಾಗೂ ತಟ್ಟಿದ ಬಿಸಿ, ನಾಗರಿಕರಿಗೆ ಸಂದೇಶ ರವಾನೆ

Sampriya

ಶುಕ್ರವಾರ, 9 ಮೇ 2025 (19:10 IST)
Photo Credit X
ನವದೆಹಲಿ: ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಉಲ್ಬಣಗೊಳ್ಳುತ್ತಿದ್ದ ಹಾಗೇ ನೆರೆಯ ರಾಷ್ಟ್ರ ಚೀನಾ ತನ್ನ ನಾಗರಿಕರಿಗೆ ಸಲಹೆಯನ್ನು ನೀಡಿದೆ.

ಗ್ಲೋಬಲ್ ಟೈಮ್ಸ್ ಪ್ರಕಾರ, ಎರಡೂ ದೇಶಗಳಲ್ಲಿನ ಚೀನಾ ರಾಯಭಾರ ಕಚೇರಿ ರಾಯಭಾರ ಕಚೇರಿಗಳು ಶುಕ್ರವಾರ ಮಧ್ಯಾಹ್ನ ತಮ್ಮ ಅಧಿಕೃತ WeChat ಖಾತೆಗಳಲ್ಲಿ ಈ ಸಂದೇಶವನ್ನು ಹಂಚಿಕೊಂಡಿದೆ.

ಭಾರತ ಅಥವಾ ಪಾಕಿಸ್ತಾನಕ್ಕೆ ಪ್ರಯಾಣಿಸುವಾಗ ಅಲ್ಲಿನ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಿಕೊಂಡು, ಎಚ್ಚರಿಕೆಯಿಂದ ಮುಂದಿನ ನಿರ್ಧಾರವನ್ನು ಕೈಗೊಳ್ಳಬೇಕೆಂದು ಚೀನಾದ ನಾಗರಿಕರಿಗೆ ಸಲಹೆ ನೀಡಿದೆ. ಈಗಾಗಲೇ ಭಾರತ ಅಥವಾ ಪಾಕಿಸ್ತಾನದಲ್ಲಿರುವವರಿಗೆ ಭದ್ರತಾ ಮುನ್ನೆಚ್ಚರಿಕೆಗಳನ್ನು ಬಲಪಡಿಸಲು ಮತ್ತು ಸುರಕ್ಷತಾ ಕ್ರಮಗಳನ್ನು ಹೆಚ್ಚಿಸಲು ಸಲಹೆಯನ್ನು ನೀಡಲಾಗಿದೆ ಎಂದಿದೆ.

ಚೀನಾದ ಹೊರತಾಗಿ, ಯುನೈಟೆಡ್ ಸ್ಟೇಟ್ಸ್, ಯುನೈಟೆಡ್ ಕಿಂಗ್‌ಡಮ್, ಕೆನಡಾ, ಆಸ್ಟ್ರೇಲಿಯಾ ಮತ್ತು ಸಿಂಗಾಪುರ್ ಸಹ ಪ್ರಯಾಣ ಸಲಹೆಯನ್ನು ನೀಡಿದ್ದು, ಭಾರತದಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡುವುದನ್ನು ತಪ್ಪಿಸುವಂತೆ ತಮ್ಮ ನಾಗರಿಕರನ್ನು ಒತ್ತಾಯಿಸಿವೆ.

ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಸಲಹೆಗಳು ಬಂದಿವೆ. ಗುರುವಾರ, ಭಾರತೀಯ ಸೇನೆಯ ಆಪರೇಷನ್ ಸಿಂಧೂರ್ ನೆರೆಯ ದೇಶದಲ್ಲಿರುವ ಭಯೋತ್ಪಾದಕ ಶಿಬಿರಗಳನ್ನು ಗುರಿಯಾಗಿಸಿಕೊಂಡ ನಂತರ ಪಾಕಿಸ್ತಾನವು ಭಾರತದ ಮೇಲೆ ಕ್ಷಿಪಣಿ ದಾಳಿ ನಡೆಸಿತು.

ಕ್ಷಿಪಣಿ ದಾಳಿಗೆ ಪ್ರತಿಯಾಗಿ ಭಾರತವು ಪಾಕಿಸ್ತಾನದ ಕ್ಷಿಪಣಿಗಳು, ಯುದ್ಧವಿಮಾನಗಳು ಮತ್ತು ಡ್ರೋನ್‌ಗಳನ್ನು ಪ್ರತಿಬಂಧಿಸಿತು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ