ಚುನಾವಣಾ ಪ್ರಚಾರಕ್ಕೆ ಹಣವಿಲ್ಲದೆ ಕಿಡ್ನಿ ಮಾರಲು ಮುಂದಾದ ಪಕ್ಷೇತರ ಅಭ್ಯರ್ಥಿ

ಶನಿವಾರ, 6 ಏಪ್ರಿಲ್ 2019 (14:53 IST)
ದಿಸ್ಪುರ್ : ಲೋಕಸಭಾ ಚುನಾವಣೆಗಾಗಿ ಧುಬ್ರಿ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಪಕ್ಷೇತರ ಅಭ್ಯರ್ಥಿಯೊಬ್ಬರು ಚುನಾವಣಾ ಪ್ರಚಾರ ವೆಚ್ಚಕ್ಕಾಗಿ ತಮ್ಮ ಕಿಡ್ನಿಯನ್ನು ಮಾರಲು ನಿರ್ಧಾರ ಮಾಡಿರುವುದಾಗಿ ತಿಳಿದುಬಂದಿದೆ.


ಅಸ್ಸಾಂನ ಕೊಕ್ರಝಾರ್ ಜಿಲ್ಲೆಯ ಮೊಡತಿ ಗ್ರಾಮದ ನಿವಾಸಿ 26 ವರ್ಷದ ಸುಕುರ್ ತಮ್ಮ ಧುಬ್ರಿ ಕ್ಷೇತ್ರದ ಅಭಿವೃದ್ಧಿಗಾಗಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದು, ಅದಕ್ಕಾಗಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಆದರೆ ಪ್ರಚಾರಕ್ಕೆ ಹಣವಿರದ ಕಾರಣ ಹಣ ಸಂಗ್ರಹಕ್ಕೆ ಮುಂದಾಗಿದ್ದು, ಒಂದು ವೇಳೆ ಹಣ ಸಿಗದಿದ್ದರೆ ಕಿಡ್ನಿ ಮಾರುವುದಾಗಿ ನಿರ್ಧರಿಸಿದ್ದಾರೆ ಎನ್ನಲಾಗಿದೆ.


ಈ  ಬಗ್ಗೆ ಮಾತನಾಡಿದ ಅವರು, ಕೆಲವರು ಸ್ವ-ಹಿತಾಸಕ್ತಿಗಾಗಿ ರಾಜಕೀಯ ಪ್ರವೇಶ ಮಾಡುತ್ತಾರೆ. ಅಂತಹ ವ್ಯಕ್ತಿಗಳನ್ನು ಚಿಕ್ಕಂದಿನಿಂದ ನೋಡಿದ್ದೇನೆ. ಬಡವರಿಗೆ ಸಹಾಯ ಮಾಡಲು ಯಾರೂ ಮುಂದೆ ಬರುತ್ತಿಲ್ಲ. ಹೀಗಾಗಿ ನಾನು ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದೇನೆ. ಈ ಕನಸನ್ನು ಈಡೇರಿಸಲು ಕಿಡ್ನಿ ಮಾರಲು ಕೂಡ ಹಿಂದೇಟು ಹಾಕುವುದಿಲ್ಲ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ