ಭಾರತ ಸೇನಾಪಡೆಗಳನ್ನು ಬೆಂಬಲಿಸುತ್ತದೆಯೇ ಹೊರತು ಉಗ್ರರನ್ನಲ್ಲ: ಬಿಜೆಪಿ

ಸೋಮವಾರ, 25 ಜುಲೈ 2016 (19:02 IST)
ದೇಶದ ಜನತೆ ಸೇನಾಪಡೆಗಳನ್ನು ಬೆಂಬಲಿಸುತ್ತದೆಯೇ ಹೊರತು ಉಗ್ರರನ್ನಲ್ಲ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಹೇಳಿದ್ದಾರೆ.
 
ಹಿಜ್ಬುಲ್ ಕಮಾಂಡರ್ ಬುರ್ಹಾನ್ ವನಿ ಎನ್‌ಕೌಂಟರ್‌ ನಂತರ ಕಾಶ್ಮಿರ ಕಣೆವೆಯಲ್ಲಿ ಉಂಟಾದ ಹಿಂಸಾಚಾರದಲ್ಲೆ 46 ಕ್ಕೂ ಹೆಚ್ಚು ಜನ ಮೃತರಾಗಿದ್ದಾರೆ.
 
ಕಳೆದ 1994ರಲ್ಲಿ ಸಂಸತ್ತಿನಲ್ಲಿ ಪಿಓಕೆ ಭಾರತ ಮತ್ತು ಪಾಕಿಸ್ತಾನದ ಮಧ್ಯದ ವಿಷಯವಾಗಿದೆ ಎನ್ನುವ ನಿರ್ಣಯವನ್ನು ಅವಿರೋಧವಾಗಿ ಅಂಗೀಕರಿಸಲಾಗಿತ್ತು ಎಂದು ತಿಳಿಸಿದ್ದಾರೆ.
 
ಕಾಶ್ಮಿರದ ಬಗ್ಗೆ ಯಾವುದೇ ವಿವಾದವಿಲ್ಲ. ಕಾಶ್ಮಿರ ನಮ್ಮ ದೇಶದ ಅವಿಭಾಜ್ಯ ಅಂಗ ಎನ್ನುವುದನ್ನು ಪ್ರತಿಯೊಬ್ಬರು ಅರಿಯಬೇಕು. ಕಾಶ್ಮಿರ ನಮ್ಮದಂದರೆ ಕಾಶ್ಮಿರ ಜನತೆ ಕೂಡಾ ನಮ್ಮವರು ಎಂದರು.
 
ಹಿಜ್ಬುಲ್ ಮುಜಾಹಿದಿನ್ ಉಗ್ರ ಬುರ್ಹಾನ್ ವನಿ ವಿರುದ್ಧ 14 ಪ್ರಕರಣಗಳು ದಾಖಲಾಗಿದ್ದು ಆತನನ್ನು ಹಿಡಿದುಕೊಟ್ಟವರಿಗೆ 10 ಲಕ್ಷ ರೂಪಾಯಿ ಬಹುಮಾನ ಘೋಷಿಸಲಾಗಿತ್ತು. ಇಂತಹ ಉಗ್ರನನ್ನು ಪಾಕ್ ಸಮರ್ಥಿಸಿಕೊಳ್ಳುತ್ತಿದೆ ಎಂದು ಬಿಜೆಪಿ ಮುಖಂಡ ರಾಮ್ ಮಾಧವ್ ಲೇವಡಿ ಮಾಡಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ