ಅಥೆನ್ಸ್ : ಭಾರತ ಚಂದ್ರನ ಮೇಲೆ ತ್ರಿವರ್ಣ ಧ್ವಜ ಹಾರಿಸುವ ಮೂಲಕ ಇಡೀ ವಿಶ್ವಕ್ಕೇ ತನ್ನ ಸಾಮರ್ಥ್ಯವನ್ನ ತೋರಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಚಂದ್ರಯಾನ ಗುಣಗಾನ ಮಾಡಿದ್ದಾರೆ.
ಸುಮಾರು 40 ವರ್ಷಗಳ ಬಳಿಕ ಭಾರತದ ಪ್ರಧಾನಿಯೊಬ್ಬರು ಗ್ರೀಸ್ ದೇಶಕ್ಕೆ ಮೊದಲ ಬಾರಿಗೆ ಭೇಟಿ ನೀಡಿದ್ದು, ಪ್ರಧಾನಿ ಮೋದಿ ಅವರನ್ನ ಗ್ರೀಸ್ ರಾಷ್ಟ್ರಪತಿ ಹಾಗೂ ಪ್ರಧಾನಿ ಬರಮಾಡಿಕೊಂಡರು.
ಭಾರತೀಯ ಸಮುದಾಯ ಸಾಂಪ್ರದಾಯಿಕವಾಗಿ ಮೋದಿ ಅವರನ್ನು ಸ್ವಾಗತಿಸಲಾಯಿತು. ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಗ್ರೀಸ್ ನಾಗರಿಕ ಗೌರವ ದಿ ಗ್ರ್ಯಾಂಡ್ ಕ್ರಾಸ್ ಆಫ್ ದಿ ಆರ್ಡರ್ ಆಫ್ ಹಾನರ್ ನೀಡಿ ಗೌರವಿಸಲಾಯಿತು. ಅಧ್ಯಕ್ಷೆ ಕ್ಯಾಥರೀನಾ ಸಕೆಲ್ಲರೊಪೌಲೊ ಅವರು ಮೋದಿಗೆ ಅವರಿಗೆ ಗ್ರೀಸ್ ನಾಗರಿಕ ಗೌರವ ನೀಡಿ ಸನ್ಮಾನಿಸಿದರು.
ನಂತರ ಗ್ರೀಸ್‌ನ ರಾಜಧಾನಿ ಅಥೆನ್ಸ್‌ನಲ್ಲಿ ಭಾರತೀಯ ಸಮುದಾಯದವನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಭಾರತದ ಚಂದ್ರಯಾನ ಸಾಧನೆಯನ್ನ ಹಾಡಿ ಹೊಗಳಿದರು. ಚಂದ್ರನ ಮೇಲೆ ತ್ರಿವರ್ಣ ಧ್ವಜ ಹಾರಿಸುವ ಮೂಲಕ ಇಡೀ ಜಗತ್ತಿಗೆ ಭಾರತ ತನ್ನ ಸಾಮರ್ಥ್ಯ ತೋರಿಸಿದೆ ಎಂದು ಶ್ಲಾಘಿಸಿದರು.