ದೇಶದಲ್ಲಿ 28,204 ಮಂದಿಗೆ ಸೋಂಕು: 147 ದಿನ ಕನಿಷ್ಠಕ್ಕೆ ಕುಸಿದ ಕೊರೊನಾ!

ಮಂಗಳವಾರ, 10 ಆಗಸ್ಟ್ 2021 (14:25 IST)
ದೇಶದಲ್ಲಿ ಕಳೆದ 23 ಗಂಟೆಗಳಲ್ಲಿ 28,204 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 373 ಮಂದಿ ಅಸುನೀಗಿದ್ದಾರೆ. ಈ ಮೂಲಕ ದೇಶದಲ್ಲಿ ಕಳೆದ 147 ದಿನಗಳಲ್ಲೇ ಕನಿಷ್ಠ ಮಟ್ಟಕ್ಕೆ ಸೋಂಕು ಕುಸಿದಿದೆ.
ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 3,19,98,158ಕ್ಕೆ ಏರಿಕೆಯಾಗಿದ್ದು, ಒಟ್ಟಾರೆ ಸಾವಿನ ಸಂಖ್ಯೆ 4,28,682ಕ್ಕೆ ಏರಿಕೆಯಾಗಿದೆ.
ಒಂದು ದಿನದಲ್ಲಿ 41,511 ಮಂದಿ ಸೋಂಕಿನಿಂದ ಗುಣಮುಖಿತರಾಗಿದ್ದು, ಒಟ್ಟಾರೆ ಗುಣಮುಖಿತರ ಸಂಖ್ಯೆ 3,11,80,968ಕ್ಕೆ ಏರಿಕೆಯಾಗಿದೆ. ಇದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ 3,88,508ಕ್ಕೆ ಕುಸಿತ ಕಂಡಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ