ದೇಶದಲ್ಲಿ ಸತತ 4ನೇ ದಿನ 2000ಕ್ಕಿಂತ ಅಧಿಕ ಸೋಂಕು ಪತ್ತೆ
ದೇಶದಲ್ಲಿ ಕಳೆದ 24 ಗಂಟೆಯಲ್ಲಿ 2572 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ಕಳೆದ 4 ದಿನಗಳಿಂದ ಸತತವಾಗಿ 2000ಕ್ಕಿಂತ ಅಧಿಕ ಸೋಂಕು ಪ್ರಕರಣಗಳು ಕಂಡುಬರುತ್ತಿವೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶನಿವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ದೇಶದಲ್ಲಿ ಕಳೆದ ಒಂದು ದಿನದ 33 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಒಂದು ದಿನದಲ್ಲಿ ೧೬೫೬ ಮಂದಿ ಸೋಂಕಿನಿಂದ ಗುಣಮುಖಿತರಾಗಿದ್ದು, ಒಟ್ಟಾರೆ ಗುಣಮುಖಿತರ ಸಂಖ್ಯೆ 4,25,17,724ಕ್ಕೆ ಏರಿಕೆಯಾಗಿದೆ. ಇದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ 15,079ಕ್ಕೆ ಜಿಗಿತ ಕಂಡಿದೆ.