ದೇಶದಲ್ಲಿ ಕಳೆದ 24 ಗಂಟೆಯಲ್ಲಿ 4270 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 15 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ದೇಶದಲ್ಲಿ ನಿನ್ನೆಗೆ ಹೋಲಿಸಿದರೆ ಶೇ.43.21ರಷ್ಟು ಸೋಂಕು ಪ್ರಕರಣಗಳು ಹೆಚ್ಚಾಗಿವೆ.
ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 4,31,76,817ಕ್ಕೆ ಏರಿಕೆಯಾದರೆ, ಸಾವಿನ ಸಂಖ್ಯೆ 5,24,692ಕ್ಕೆ ಜಿಗಿತ ಕಂಡಿದೆ. ಕೇರಳದಲ್ಲಿ ಅತೀ ಹೆಚ್ಚು ಸಾವು ಪ್ರಕರಣಗಳು ವರದಿಯಾಗಿವೆ.
ದೇಶದಲ್ಲಿ ಒಂದು ದಿನದಲ್ಲಿ 2619 ಮಂದಿ ಗುಣಮುಖಿತರಾಗಿದ್ದು, ಒಟ್ಟಾರೆ ಗುಣಮುಖಿತರ ಸಂಖ್ಯೆ 4,26,28,073ಕ್ಕೆ ಏರಿಕೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 24,052ಕ್ಕೆ ಜಿಗಿತ ಕಂಡಿದೆ.