ದೇಶದಲ್ಲಿ 40,120 ಕೊರೊನಾ ಪ್ರಕರಣ ದೃಢ: 585 ಮಂದಿ ಸೋಂಕಿಗೆ ಬಲಿ
ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 3,21,17,826ಕ್ಕೆ ಏರಿಕೆಯಾಗಿದ್ದು, ಒಟ್ಟಾರೆ ಸಾವಿನ ಸಂಖ್ಯೆ 4,30,254ಕ್ಕೆ ಜಿಗಿತ ಕಂಡಿದೆ.
ಒಂದು ದಿನದಲ್ಲಿ 42,295 ಮಂದಿ ಗುಣಮುಖಿತರಾಗಿದ್ದು, ಒಟ್ಟಾರೆ ಗುಣಮುಖಿತರ ಸಂಖ್ಯೆ 3,13,02,345ಕ್ಕೆ ಏರಿಕೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 3,85,227ಕ್ಕೆ ಇಳಿಕೆಯಾಗಿದೆ.