India Pakistan: ಸತತ ಐದನೇ ದಿನವೂ ಭಾರತೀಯ ಸೇನೆಯನ್ನು ಕೆಣಕಿ ಪೆಟ್ಟು ತಿಂದ ಪಾಕಿಸ್ತಾನ
ಗಡಿ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನ ಪಡೆ ನಿನ್ನೆಯೂ ತಡರಾತ್ರಿ ಗುಂಡಿನ ದಾಳಿ ನಡೆಸಿದೆ. ಇದಕ್ಕೆ ಭಾರತೀಯ ಸೇನೆ ತಕ್ಕ ತಿರುಗೇಟು ನೀಡಿದೆ. ನಿನ್ನೆಯ ದಾಳಿಯಲ್ಲೂ ಯಾವುದೇ ನೋವುಗಳಾಗಿಲ್ಲ ಎಂದು ತಿಳಿದುಬಂದಿದೆ.
ಕುಪ್ವಾರಾ ಮತ್ತು ಬಾರಾಮುಲ್ಲಾ ಜಿಲ್ಲೆ ಮತ್ತು ಅಖ್ನೂರ್ ಸೆಕ್ಟರ್ ಬಳಿ ಗುಂಡಿನ ದಾಳಿ ನಡೆದಿದೆ. ಗುರುವಾರದಿಂದ ಪಾಕಿಸ್ತಾನದ ಗುಂಡಿನ ದಾಳಿ ನಿರಂತರವಾಗಿ ಮುಂದುವರಿದಿದೆ. ಅದೃಷ್ಟವಶಾತ್ ಇದುವರೆಗೆ ಯಾವುದೇ ಸಾವು ನೋವುಗಳಾಗಿಲ್ಲ.
ಭಾರತ ರಾಜತಾಂತ್ರಿಕವಾಗಿ ಕಠಿಣ ಕ್ರಮ ಕೈಗೊಳ್ಳುತ್ತಿದ್ದಂತೇ ಪಾಕಿಸ್ತಾನ ಗಡಿಯಲ್ಲಿ ಗುಂಡಿನ ದಾಳಿ ನಡೆಸುವ ಮೂಲಕ ಪ್ರಚೋದನೆ ನೀಡುತ್ತಿದೆ. ಆದರೆ ಭಾರತೀಯ ಸೇನೆ ಇದಕ್ಕೆ ತಕ್ಕ ಪ್ರತ್ಯುತ್ತರ ನೀಡುತ್ತಲೇ ಬಂದಿದೆ.