2018ರೊಳಗೆ ಭಾರತ -ಪಾಕ್ ಗಡಿ ಸಂಪೂರ್ಣ ಬಂದ್: ರಾಜನಾಥ್ ಸಿಂಗ್

ಶುಕ್ರವಾರ, 7 ಅಕ್ಟೋಬರ್ 2016 (17:46 IST)
ಮುಂಬರುವ 2018ರ ವೇಳೆಗೆ ಭಾರತ ಮತ್ತು ಪಾಕಿಸ್ತಾನದ ಗಡಿಯನ್ನು ಸಂಪೂರ್ಣವಾಗಿ ಬಂದ್ ಮಾಡಲಾಗುವುದು ಎಂದು ಕೇಂದ್ರ ಗೃಹ ಖಾತೆ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
 
ನಾಲ್ಕು ರಾಜ್ಯಗಳ ಭಾರತ ಮತ್ತು ಪಾಕಿಸ್ತಾನದ ಗಡಿಯನ್ನು ವೀಕ್ಷಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಸೆಂಬರ್ 2018ರ ವೇಳೆಗೆ ಭಾರತ- ಪಾಕ್‌ ಗಡಿ ಬಂದ್ ಮಾಡುವುದರೊಂದಿಗೆ ಅತ್ಯಾಧುನಿಕ ಸೆನ್ಸಾರ್‌ಗಳನ್ನು ಅಳವಡಿಸಲಾಗುವುದು ಎಂದು ತಿಳಿಸಿದ್ದಾರೆ. 
 
ಪಾಕಿಸ್ತಾನದೊಂದಿಗೆ ಗಡಿಯನ್ನು ಹೊಂದಿರುವ ರಾಷ್ಟ್ರಗಳ ಸಲಹೆಗಳನ್ನು ಗಮನಿಸಲಾಗುತ್ತಿದ್ದು, ಸೆಕ್ಯೂರಿಟಿ ಗ್ರಿಡ್ ಆರಂಭಿಸಲು ಕೂಡಾ ಚಿಂತನೆ ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
 
ಭಾರತ- ಪಾಕ್ ಗಡಿಯನ್ನು ಸಂಪೂರ್ಣವಾಗಿ ಮುಚ್ಚುವ ಯೋಜನೆಯನ್ನು ಕೇಂದ್ರ ಗೃಹ ಸಚಿವಾಲಯ ಮೇಲ್ವಿಚಾರಣೆ ನಡೆಸಲಿದೆ. ರಾಜ್ಯಮಟ್ಟದಲ್ಲಿ ಮುಖ್ಯ ಕಾರ್ಯದರ್ಶಿಗಳು ಮತ್ತು ಬಿಎಸ್‌ಎಫ್ ಅಧಿಕಾರಿಗಳು ಮೇಲ್ವಿಚಾರಣೆ ನಡೆಸಲಿದ್ದಾರೆ ಎಂದು ಗೃಹ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ವೆಬ್ದುನಿಯಾವನ್ನು ಓದಿ