ತಿರುವನಂತಪುರಂ : ಶ್ರೀಲಂಕಾಕ್ಕೆ ಭಾರತ ಸರ್ಕಾರ ಯಾವಾಗಲೂ ಬೆಂಬಲ ನೀಡುತ್ತದೆ ಎಂದು ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕರ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸ್ತುತ ದ್ವೀಪ ರಾಷ್ಟ್ರ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ. ಈ ಹಿನ್ನೆಲೆಯಲ್ಲಿ ನೆರೆಯ ದೇಶಕ್ಕೆ ಸಹಾಯ ಮಾಡಲು ಪ್ರಯತ್ನಿಸುತ್ತಿದೆ. ಸದ್ಯ ನಿರಾಶ್ರಿತರ ಬಿಕ್ಕಟ್ಟು ಇಲ್ಲ ಎಂದು ಸ್ಪಷ್ಟಪಡಿಸಿದರು.
ನೆರೆಹೊರೆಯ ಮೊದಲ ನೀತಿ ಅಡಿಯಲ್ಲಿ, ಸಂಕಷ್ಟಗಳನ್ನು ನಿವಾರಿಸಲು ಸಹಾಯಕ್ಕಾಗಿ ಶ್ರೀಲಂಕಾ ಸರ್ಕಾರದ ಮನವಿಗೆ ಭಾರತವು ತುರ್ತಾಗಿ ಪ್ರತಿಕ್ರಿಯಿಸಿದೆ. ಮೂಲಸೌಕರ್ಯ ಸಂಪರ್ಕ ಮತ್ತು ನವೀಕರಿಸಬಹುದಾದ ಇಂಧನದ ಮೂಲಕ ಉಭಯ ದೇಶಗಳ ನಡುವಿನ ಆರ್ಥಿಕ ಸಂಪರ್ಕವನ್ನು ಹೆಚ್ಚಿಸುತ್ತದೆ ಎಂದು ಭರವಸೆ ನೀಡಿದರು.
ಈಗಾಗಲೇ ಶ್ರೀಲಂಕಾಕ್ಕೆ ಹೆಚ್ಚು ಬೆಂಬಲ ನೀಡಿದ್ದೇವೆ. ಇನ್ನೂ ಹೆಚ್ಚು ಸಹಾಯ ಮಾಡಲು ಪ್ರಯತ್ನಿಸುತ್ತಿದ್ದೇವೆ. ಅವರಿಗೆ ಅಗತ್ಯವಿರುವಾಗ ನಾವು ಯಾವಾಗಲೂ ಸಹಾಯ ಮಾಡುತ್ತೇವೆ.