ಹಳಿ ತಪ್ಪಿದ ಇಂಧೋರ್-ಪಾಟ್ನಾ ಎಕ್ಸ್ ಪ್ರೆಸ್: ಮೃತರ ಸಂಖ್ಯೆ 45 ಕ್ಕೆ

ಭಾನುವಾರ, 20 ನವೆಂಬರ್ 2016 (08:41 IST)
ಕಾನ್ಪುರ: ಇಂಧೋರ್ ನಿಂದ ಪಾಟ್ನಾಗೆ ತೆರಳುತ್ತಿದ್ದ ಎಕ್ಸ್ ಪ್ರೆಸ್ ರೈಲು ಕಾನ್ಪುರದ ಸಮೀಪ ಪುಖರಾಯ ಹಳಿ ತಪ್ಪಿ ದುರಂತಕ್ಕೀಡಾಗಿದ್ದು 45 ಮಂದಿ ಸಾವನ್ನಪ್ಪಿದ್ದಾರೆ. ದುರ್ಘಟನೆಯಲ್ಲಿ 150 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಇಂಧೋರ್ ನಿಂದ ಪಾಟ್ನಾಗೆ ತೆರಳುತ್ತಿದ್ದ ರೈಲು ಇದಾಗಿದ್ದು, ಬೆಳಗಿನ ಜಾವ 3.10 ಕ್ಕೆ ಈ ದುರಂತ ಸಂಭವಿಸಿದೆ. ಒಟ್ಟು 14 ಬೋಗಿಗಳು ಹಳಿ ತಪ್ಪಿವೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ರೈಲ್ವೇ ಸಚಿವ ಸುರೇಶ್ ಪ್ರಭು ಘಟನೆ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ.

ಗಾಯಗೊಂಡವರನ್ನು ಕಾನ್ಪುರದ ವಿವಿಧ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ರೈಲ್ವೇ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದು, ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಆಂಬ್ಯುಲೆನ್ಸ್ ಗಳಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸಲಾಗುತ್ತಿದೆ.  ದುರಂತಕ್ಕೀಡಾದವರ ಬಗ್ಗೆ ಮಾಹಿತಿ ತಿಳಿಯಲು ರೈಲ್ವೇ ಇಲಾಖೆ ಸಹಾಯ ವಾಣಿ ತೆರೆದಿದೆ  05101072, 05121072 ಸಂಖ್ಯೆಯ ಸಹಾಯವಾಣಿಯನ್ನು ಸಂಪರ್ಕಿಸಬಹುದು.

ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಕೂಡಲೇ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗೆ ಸೂಚಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಈ ಬಗ್ಗೆ ಟ್ವೀಟ್ ಮಾಡಿದ್ದು, ದುರಂತಕ್ಕೀಡಾದವರಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ