ಜೈಲಲ್ಲೇ ಕುಸಿದು ಬಿದ್ದ ಇಂದ್ರಾಣಿ ಮುಖರ್ಜಿ
ಜೈಲಿನಲ್ಲಿ ಅರೆಪ್ರಜ್ಞಾವಸ್ಥೆಯಲ್ಲಿದ್ದ ಆಕೆಯನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತು. ಹಿಂದೊಮ್ಮೆ ಇದೇ ರೀತಿ ಡ್ರಗ್ ಓವರ್ ಡೋಸ್ ಆಗಿ ಆಸ್ಪತ್ರೆ ಸೇರಿದ್ದರು. ಇದೀಗ ಮತ್ತೆ ಅಸ್ವಸ್ಥರಾಗಿದ್ದು ಮುಂಬೈನ ಜೆಜೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದೀಗ ಆಕೆ ಪ್ರಜ್ಞಾಹೀನ ಸ್ಥಿತಿಗೆ ತಲುಪಲು ಕಾರಣವೇನೆಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆಕೆಯ ಆರೋಗ್ಯ ಸ್ಥಿತಿ ಗತಿ ಬಗ್ಗೆ ತೀವ್ರ ತಪಾಸಣೆ ನಡೆಸಲಾಗುತ್ತಿದೆ. ಮೂಲಗಳ ಪ್ರಕಾರ ಕಳೆದ ಬಾರಿ ಖಿನ್ನತೆಗೆ ಸಂಬಂಧಿಸಿದ ಔಷಧ ತೆಗೆದುಕೊಂಡು ಆಕೆ ಅಸ್ವಸ್ಥರಾಗಿದ್ದರು. ಈಗಲೂ ಅದೇ ರೀತಿ ಆಗಿದೆಯೋ ಅಥವಾ ಬೇರೆ ಯಾವುದಾದರೂ ಕಾರಣದಿಂದ ಈ ರೀತಿ ಆಗಿದೆಯೋ ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.