ನವದೆಹಲಿ : ಜನಪ್ರಿಯ ಸೋಶಿಯಲ್ ಮೀಡಿಯಾ ಅಪ್ಲಿಕೇಶನ್ ಇನ್ಸ್ಟಾಗ್ರಾಮ್ ಗುರುವಾರ ವಿಶ್ವದ ವಿವಿಧ ಭಾಗಗಳಲ್ಲಿ ಸರ್ವರ್ ಡೌನ್ ಆಗಿತ್ತು.
ಇದರಿಂದ ಇನ್ಸ್ಟಾಗ್ರಾಮ್ ಬಳಕೆದಾರರು ಫೋಟೋ, ವೀಡಿಯೋ ಪೋಸ್ಟ್ ಮಾಡಲಾಗದೇ ಪರದಾಡಿದ್ದಾರೆ. ಬಳಕೆದಾರರು ಇನ್ಸ್ಟಾಗ್ರಾಮ್ ಅಪ್ಲಿಕೇಶನ್ ಅನ್ನು ಮತ್ತೆ ಮೊದಲಿನಿಂದ ಓಪನ್ ಮಾಡಿದರೂ ಕ್ರ್ಯಾಶ್ ಆಗುತ್ತಿತ್ತು ಎಂದು ವರದಿಯಾಗಿದೆ.
ಬಳಕೆದಾರರು ಎದುರಿಸುತ್ತಿರುವ ಸಮಸ್ಯೆಯನ್ನು ಒಪ್ಪಿಕೊಂಡ ಇನ್ಸ್ಟಾಗ್ರಾಮ್, ಕೆಲವು ಬಳಕೆದಾರರು ಇನ್ಸ್ಟಾಗ್ರಾಮ್ ಅಪ್ಲಿಕೇಶನ್ ಓಪನ್ ಮಾಡಲು ಆಗದೇ ಸಮಸ್ಯೆ ಎದುರಿಸುತ್ತಿರುವುದು ನಮಗೆ ತಿಳಿದುಬಂದಿದೆ.
ನಾವು ಸಾಧ್ಯವಾದಷ್ಟು ಶೀಘ್ರದಲ್ಲಿಯೇ ಪರಿಸ್ಥಿತಿಯನ್ನು ಸಾಮಾನ್ಯ ಸ್ಥಿತಿಗೆ ತರಲು ಕಾರ್ಯನಿರ್ವಹಿಸುತ್ತಿದ್ದೇವೆ ಎಂದು ತಿಳಿಸಿತ್ತು. ಈ ರೀತಿಯ ಅಡಚಣೆಗೆ ಕ್ಷಮಿಸಿ ಎಂದು ಟ್ವೀಟ್ ಮಾಡಿ ಕ್ಷಮೆ ಕೋರಿದೆ.
ಹೀಗಿದ್ದರೂ ಅನೇಕ ಇನ್ಸ್ಟಾಗ್ರಾಮ್ ಬಳಕೆದಾರರು ಈಗ ಸುಮಾರು ಒಂದು ಗಂಟೆಯವರೆಗೂ ಇನ್ಸ್ಟಾಗ್ರಾಮ್ ಸ್ಥಗಿತಗೊಂಡಿದೆ ಮತ್ತು ವೈಬ್ಸೈಟ್ ಮೂಲಕ ಇನ್ಸ್ಟಾಗ್ರಾಮ್ಗೆ ಲಾಗ್ ಇನ್ ಆಗಲು ಸಾಧ್ಯವಾಗುತ್ತಿಲ್ಲ ಎಂದು ಟ್ವೀಟ್ ಮಾಡಿ ಕಿಡಿಕಾರಿದ್ದಾರೆ.