ಹೂಡಿಕೆದಾರರ ಹಿತಾಸಕ್ತಿಯೇ ನನಗೆ ಮುಖ್ಯ : ಅದಾನಿ

ಶುಕ್ರವಾರ, 3 ಫೆಬ್ರವರಿ 2023 (07:13 IST)
ನವದೆಹಲಿ : ಉದ್ಯಮಿ ಗೌತಮ್ ಅದಾನಿ ಸಮೂಹ ಸಂಸ್ಥೆಗಳ ಷೇರುಗಳು ಭಾರೀ ಪ್ರಮಾಣದಲ್ಲಿ ಕುಸಿತ ಕಂಡಿರುವ ಬಗ್ಗೆ ಅಮೆರಿಕದ ಹಿಂಡೆನ್ಬರ್ಗ್ ರಿಸರ್ಚ್ ಸಂಸ್ಥೆ ಪ್ರಕಟಿಸಿದ್ದ ವರದಿ ವಿಶ್ವಾದ್ಯಂತ ಸದ್ದು ಮಾಡಿತ್ತು.

ವರದಿ ಪ್ರಕಟಗೊಂಡ ಬೆನ್ನಲ್ಲೇ ಅದಾನಿ ಸಮೂಹ ಸಂಸ್ಥೆಗಳ ಷೇರು ಕಳೆದ ಮೂರ್ನಾಲ್ಕು ದಿನಗಳಲ್ಲಿ ಮತ್ತಷ್ಟು ಕುಸಿತ ಕಂಡಿತು. ಈ ಕುರಿತು ಮೊದಲ ಬಾರಿಗೆ ಗೌತಮ್ ಅದಾನಿ ಪ್ರತಿಕ್ರಿಯೆ ನೀಡಿದ್ದಾರೆ.

20,000 ಕೋಟಿ ರೂ. ಮೌಲ್ಯದ ಎಫ್ಪಿಒಗೆ (ಸಾರ್ವಜನಿಕ ಕೊಡುಗೆ) ಅದಾನಿ ಕಂಪನಿಯು ಇತ್ತೀಚೆಗಷ್ಟೇ ಚಾಲನೆ ನೀಡಿತ್ತು. ಆದರೆ ಈಗ ಎಫ್ಪಿಒ ರದ್ದುಗೊಳಿಸಿ, ಹೂಡಿಕೆದಾರರಿಗೆ ಹಣ ವಾಪಸ್ ಕೊಡುವುದಾಗಿ ಪ್ರಕಟಣೆಯಲ್ಲಿ ತಿಳಿಸಿತ್ತು. ಇದರ ಬೆನ್ನಲ್ಲೇ ಗೌತಮ್ ಅದಾನಿ ಪ್ರತಿಕ್ರಿಯಿಸಿದ್ದು, ಹೂಡಿಕೆದಾರರ ಆಸಕ್ತಿ ಬಹಳ ಮುಖ್ಯ ಎಂದು ಹೇಳಿದ್ದಾರೆ.

ನಮ್ಮ ಷೇರು ಮೌಲ್ಯ ಕುಸಿದಿದೆ. ಈ ಸಂದರ್ಭದಲ್ಲಿ ಎಫ್‌ಪಿಒನೊಂದಿಗೆ ಮುಂದುವರಿಯುವುದು ನೈತಿಕವಾಗಿ ಸರಿಯಲ್ಲ ಎಂದು ಅದಾನಿ ತಿಳಿಸಿದ್ದಾರೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ