ನವದೆಹಲಿ : ಅಗ್ನಿಪಥ್ ಯೋಜನೆಯನ್ನು ರಾಷ್ಟ್ರೀಯ ಹಿತಾಸಕ್ತಿಗಾಗಿ ಪರಿಚಯಿಸಲಾಗಿದೆ. ಈ ಯೋಜನೆಯಲ್ಲಿ ಮಧ್ಯಪ್ರವೇಶಿಸಲು ಯಾವುದೇ ಕಾರಣಗಳಿಲ್ಲ ಎಂದು ದೆಹಲಿ ಹೈಕೋರ್ಟ್ ಹೇಳಿದೆ.
ಅಗ್ನಿಪಥ್ ಯೋಜನೆಯ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ್ದ ಹೈಕೋರ್ಟ್ ಇಂದು (ಫೆ.27) ತೀರ್ಪು ಪ್ರಕಟಿಸಿದೆ. ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಸುಬ್ರಮೋನಿಯಂ ಪ್ರಸಾದ್ ಅವರ ವಿಭಾಗೀಯ ಪೀಠವು ಈ ತೀರ್ಪು ನೀಡಿದೆ.
`ನ್ಯಾಯಾಲಯವು ಈ ಯೋಜನೆಯಲ್ಲಿ ಮಧ್ಯಪ್ರವೇಶಿಸಲು ಯಾವುದೇ ಕಾರಣವನ್ನು ಕಂಡುಕೊಳ್ಳುವುದಿಲ್ಲ ಎಂದು ಹೇಳಿ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಲಾಗಿದೆ. ನಾವು ಯೋಜನೆಯನ್ನು ರಾಷ್ಟ್ರೀಯ ಹಿತಾಸಕ್ತಿಯಿಂದ ಪರಿಚಯಿಸಲಾಗಿದೆ ಎಂದು ತೀರ್ಮಾನಿಸಬಹುದು ಎಂದು ನ್ಯಾಯಾಲಯ ಹೇಳಿದೆ.