16 ವರ್ಷಗಳ ನಿರಶನ ಅಂತ್ಯಗೊಳಿಸಿ ಚುನಾವಣೆಯಲ್ಲಿ ಸ್ಪರ್ಧಿಸಲು ಐರೋಮ್ ಶರ್ಮಿಲಾ ನಿರ್ಧಾರ

ಮಂಗಳವಾರ, 26 ಜುಲೈ 2016 (16:26 IST)
ಮಣಿಪುರದಲ್ಲಿ ಸೇನೆಗೆ ನೀಡಲಾಗಿರುವ ವಿಶೇಷಾಧಿಕಾರಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ 16 ವರ್ಷಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಮಾನವ ಹಕ್ಕುಗಳ ಕಾರ್ಯಕರ್ತೆ ಐರೋಮ್ ಶರ್ಮಿಲಾ, ಇದೀಗ ನಿರಶನ ಅಂತ್ಯಗೊಳಿಸಿ ಚುನಾವಣೆಗೆ ಸ್ಪರ್ಧಿಸಲು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.  
 
ಮಣಿಪುರದಲ್ಲಿ ಸೇನೆಗೆ ನೀಡಲಾಗಿರುವ ವಿಶೇಷಾಧಿಕಾರಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ 16 ವರ್ಷಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರೂ ಕೇಂದ್ರ ಸರಕಾರ ಯಾವುದೇ ಖಚಿತ ಭರವಸೆ ನೀಡುತ್ತಿಲ್ಲ. ಆದ್ದರಿಂದ, ಸಮಸ್ಯೆಗಳನ್ನು ಪರಿಹರಿಸಲು ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂದು ತಿಳಿಸಿದ್ದಾರೆ.
 
ಕಳೆದ 2000 ನವೆಂಬರ್‌ ತಿಂಗಳಿನಿಂದ ಸೇನಾಪಡೆಗಳ ವಿಶೇಷ ಅಧಿಕಾರ ವಿರೋಧಿಸಿ ಹೋರಾಟ ನಡೆಸುತ್ತಿರುವ ಐರೋಮ್ ಶರ್ಮಿಲಾ, ಚುನಾವಣೆಯಲ್ಲಿ ಆಯ್ಕೆಯಾಗಿ ರಾಜ್ಯದ ಜನತೆಯ ಸಮಸ್ಯೆಗಳಿಗೆ ಸ್ಪಂದಿಸಬೇಕು ಎನ್ನುವ ಬಯಕೆ ವ್ಯಕ್ತಪಡಿಸಿದ್ದಾರೆ. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ