ನವದೆಹಲಿ : ಅಂತಾರಾಷ್ಟ್ರೀಯ ಮಾಧ್ಯಮ ಸಂಸ್ಥೆಯೊಂದರ ದಾಖಲೆ ಪರಿಶೀಲನೆ ವೇಳೆ ಸಂಸ್ಥೆಯು ತೆರಿಗೆ ಪಾವತಿಸದಿರುವುದು.
ಬಹಿರಂಗಪಡಿಸದ ಆದಾಯ ಹೊಂದಿರುವ ಬಗ್ಗೆ ಸಾಕ್ಷ್ಯಗಳು ಸಿಕ್ಕಿದೆ ಎಂದು ನೇರ ತೆರಿಗೆಗಳ ಕೇಂದ್ರೀಯ ಮಂಡಳಿ ಶುಕ್ರವಾರ ಹೇಳಿದೆ.
ಬಿಬಿಸಿ ಹೆಸರನ್ನು ಉಲ್ಲೇಖಿಸದೆ ಹೇಳಿಕೆ ಬಿಡುಗಡೆ ಮಾಡಿದ ಸಿಬಿಡಿಟಿ, ಇಲಾಖೆ ಹಲವಾರು ಸಾಕ್ಷ್ಯಗಳನ್ನು ಕಲೆಹಾಕಿದೆ. ಡಿಜಿಟಲ್ ದಾಖಲೆಗಳು ಹಾಗೂ ಉದ್ಯೋಗಿಗಳ ಹೇಳಿಕೆಗಳನ್ನು ಪಡೆದುಕೊಳ್ಳುವ ಕಾರ್ಯ ನಡೆಯುತ್ತಿದೆ.
ವಿದೇಶಿ ಸಂಸ್ಥೆಗಳಿಂದ ಭಾರತದ ಶಾಖೆಗೆ ಬಂದಿರುವ ಆದಾಯಕ್ಕೆ ಯಾವುದೇ ತೆರಿಗೆ ಪಾವತಿಯಾಗಿಲ್ಲ ಎಂದು ಉಲ್ಲೇಖಿಸಿದೆ.
ಬಿಬಿಸಿ ಸಿಬ್ಬಂದಿ ತನಿಖೆಗೆ ಸಹಕರಿಸುತ್ತಿಲ್ಲ. ಹಲವು ತಂತ್ರಗಳನ್ನು ಬಳಸಿ ತನಿಖೆ ವಿಳಂಬವಾಗುವಂತೆ ಮಾಡುತ್ತಿದ್ದಾರೆ. ಮಾಧ್ಯಮದ ಪ್ರಸಾರಕ್ಕೆ ಯಾವುದೇ ತೊಂದರೆಯಾಗದಂತೆ ಸಿಬ್ಬಂದಿ ವಿಚಾರಣೆ ಮಾಡುತ್ತಿರುವುದಾಗಿ ತಿಳಿಸಿದೆ.