ನೀರಾವರಿ ಯೋಜನೆ ಸಿಎಂ ಅಸ್ತು

ಶುಕ್ರವಾರ, 4 ಮಾರ್ಚ್ 2022 (17:00 IST)
ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾರ್ಚ್ 4ರ ಮಧ್ಯಾಹ್ನ 12.30ಕ್ಕೆ ಚೊಚ್ಚಲ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಕರ್ನಾಟಕ ಸರ್ಕಾರದ 2022-23ನೇ ಸಾಲಿನ ಬಜೆಟ್ ಅಭಿವೃದ್ಧಿ ಪರವಾಗಿದ್ದು, ಪಂಚಸೂತ್ರಗಳ ಆಧಾರದ ಬಜೆಟ್ ಎಂದು ತಮ್ಮ ಭಾಷಣದಲ್ಲಿ ಹೇಳಿದ್ದಾರೆ.
ನೀರಾವರಿ ಯೋಜನೆ:
 
* ಕಳಸಾ ಬಂಡೂರಿ ನಾಲಾ ತಿರುವು ಯೋಜನೆಗೆ 1000 ಕೋಟಿ ರು ಅನುದಾನ
 
* ಮೇಕೇದಾಟು ಯೋಜನೆ ಅನುಷ್ಠಾನಕ್ಕೆ 1000 ಕೋಟಿ ರು ಅನುದಾನ
 
* ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತಕ್ಕೆ 5000 ಕೋಟಿ ರು ಮಂಜೂರು
 
* ಭದ್ರಾ ಮೇಲ್ದಂಡೆ ಯೋಜನೆಗೆ 3000 ಕೋಟಿ ರು ಮಂಜೂರು
 
* ಎತ್ತಿನ ಹೊಳೆ ಯೋಜನೆಗೆ 3000 ಕೋಟಿ ರು ಮಂಜೂರು.
 
* ತುಂಗಭದ್ರಾ ಜಲಾಶಯದ ನೀರು ಸಂಗ್ರಹಣೆ ಕೊರತೆ ಸರಿದೂಗಿಸಲು ನವಲೆ ಬಳಿ ಸಮತೋಲನಾ ಜಲಾಶಯ ನಿರ್ಮಾಣಕ್ಕೆ 1,000 ಕೋಟಿ ರು ಅನುದಾನ.
 
* ಕೇಂದ್ರ ಸರ್ಕಾರವು PMKSY-AIBP ಅಡಿಯಲ್ಲಿ ಸನ್ನತಿ ಏತ ನೀರಾವರಿ ಯೋಜನೆ ಹಾಗೂ ಕೃಷ್ಣ ಮೇಲ್ದಂಡೆ ಯೋಜನೆ ಹಂತ -1 ಹಾಗೂ 2 ರಲ್ಲಿನ ಬೂದಿಹಾಳ, ಪೀರಾಪುರ, ನಂದವಾಡಗಿ, ನಾರಾಯಣಪುರ ಬಲದಂಡೆ(9ಎ) ಕಾಲುವೆ ವಿಸ್ತರಣೆ ಯೋಜನೆ ಅನುಷ್ಠಾನಕ್ಕೆ ಕ್ರಮ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ