ನವದೆಹಲಿ : ಪ್ರವಾದಿ ಮೊಹಮ್ಮದ್ ಪೈಗಂಬರ್ರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿ ವ್ಯಾಪಕ ಟೀಕೆಗೆ ಒಳಗಾಗಿರುವ ನೂಪುರ್ ಶರ್ಮಾ ಅವರನ್ನು ಬಿಜೆಪಿ ಅಮಾನತು ಮಾಡಿದೆ.
ನೂಪುರ್ ಶರ್ಮಾ ಹೇಳಿಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಆಕ್ಷೇಪಣೆಗೆ ಒಳಗಾಗಿದ್ದು ಈ ಕುರಿತು ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಸಹ ಟ್ವೀಟ್ ಮಾಡಿದ್ದರು.
ಪಾಕ್ ಪ್ರಧಾನಿಯ ಟ್ವೀಟ್ಗೆ ಭಾರತ ಸರ್ಕಾರ ತಿರುಗೇಟು ನೀಡಿದೆ. ಪಾಕಿಸ್ತಾನದ ಹೇಳಿಕೆಗಳನ್ನು ನಾವು ಗಮನಿಸಿದ್ದೇವೆ. ಅಲ್ಪಸಂಖ್ಯಾತರ ಹಕ್ಕುಗಳ ಉಲ್ಲಂಘನೆ ಮಾಡುವವರು ಮತ್ತೊಂದು ರಾಷ್ಟ್ರದಲ್ಲಿ ಅಲ್ಪಸಂಖ್ಯಾತರನ್ನು ನಡೆಸಿಕೊಳ್ಳುವುದರ ಕುರಿತು ಕಾಮೆಂಟ್ ಮಾಡುತ್ತಿದ್ದಾರೆ ಎಂದು ತರಾಟೆಗೆ ತೆಗೆದುಕೊಂಡಿದೆ.
ಪಾಕಿಸ್ತಾನದಲ್ಲಿನ ಹಿಂದೂಗಳು, ಸಿಖ್ಖರು, ಕ್ರಿಶ್ಚಿಯನ್ನರು ಮತ್ತು ಅಹ್ಮದೀಯರು ಸೇರಿದಂತೆ ಅಲ್ಪಸಂಖ್ಯಾತರ ವ್ಯವಸ್ಥಿತ ಕಿರುಕುಳಕ್ಕೆ ಜಗತ್ತೇ ಸಾಕ್ಷಿಯಾಗಿದೆ. ಹೀಗಿದ್ದೂ ಭಾರತದ ವಿರುದ್ಧ ಟೀಕೆ ಮಾಡುವುದು ಅಸಂಬದ್ಧ ಎಂದು ಒಇಂ ವಕ್ತಾರ ಅರಿಂದಮ್ ಬಾಗ್ಚಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.