ಕಾಯ್ದೆಯಲ್ಲಿ ಲಿಂಗ ಪಕ್ಷಪಾತ ಇದೆಯೇ : ಸುಪ್ರೀಂ

ಬುಧವಾರ, 6 ಏಪ್ರಿಲ್ 2022 (08:38 IST)
ನವದೆಹಲಿ : ಹಿಂದೂ ಉತ್ತರಾಧಿಕಾರ ಕಾಯ್ದೆಯಲ್ಲಿ ಲಿಂಗ ಪಕ್ಷಪಾತ ಇದೆಯೇ ಎಂದು ಪ್ರಶ್ನಿಸಿರುವ ಸುಪ್ರೀಂ ಕೋರ್ಟ್, ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಗುಡುವು ನೀಡಿದೆ.

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಕುರಿತ ಚರ್ಚೆಯಲ್ಲಿ ಹಿಂದೂ ಉತ್ತರಾಧಿಕಾರ ಕಾಯ್ದೆಯ ಸೆಕ್ಷನ್ಗಳು ಅಸಾಂವಿಧಾನಿಕ ಮತ್ತು ಲಿಂಗ ಸಮಾನತೆಯನ್ನು ಉಲ್ಲಂಘಿಸುತ್ತವೆ ಎಂದು ಆರೋಪಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಿಚಾರಣೆ ನಡೆಸಿತು.

ಈ ವಿಚಾರಕ್ಕೆ ಸಂಬಂಧಿಸಿದಂತೆ ನಾಲ್ಕು ವಾರಗಳ ಒಳಗೆ ಪ್ರತಿಕ್ರಿಯೆ ನೀಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಾಲಾವಕಾಶ ನೀಡಿದೆ.

ಹಿಂದೂ ಮಹಿಳೆಯರ ಪರವಾಗಿ ನ್ಯಾಯಾಲಯವು ಮಧ್ಯಪ್ರವೇಶಿಸಬೇಕು. ಏಕೆಂದರೆ ಸಮಾಜವು ಲಿಂಗ ಸಮಾನತೆಯತ್ತ ಸಾಗುತ್ತಿರುವಾಗ, ಹಿಂದೂ ಉತ್ತರಾಧಿಕಾರ ಕಾಯಿದೆಯು ಲಿಂಗದ ಆಧಾರದ ಮೇಲೆ ತಾರತಮ್ಯ ಮಾಡುತ್ತದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. 

ಕಮಲ್ ಅನಂತ್ ಖೋಪ್ಕರ್ ಅವರು ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್, ಸೂರ್ಯ ಕಾಂತ್ ಮತ್ತು ಬೇಲಾ ತ್ರಿವೇದಿ ಅವರ ತ್ರಿಸದಸ್ಯ ಪೀಠವು ಕೈಗೆತ್ತಿಕೊಂಡಿತು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ