ಈ ಮೌನ ನ್ಯಾಯವೇ? ಪ್ರಧಾನಿ, ಸ್ಮೃತಿಗೆ ಶತ್ರುಘ್ನ ಸಿನ್ಹಾ ಪ್ರಶ್ನೆ
ಪ್ಯೂ ಅಧ್ಯಯನ ವರದಿಯನ್ನು ಉಲ್ಲೇಖಿಸಿ ಶತ್ರುಘ್ನ ಸಿನ್ಹಾ ಅವರು ‘ನಮ್ಮ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವರು ಹಾಗೂ ಪ್ರಧಾನಿ ಅವರು ಈ ವಿಷಯದ ಕುರಿತು ಯಾಕೆ ಮೌನ ತಾಳಿದ್ದಾರೆ’ ಎಂದು ಟ್ವೀಟ್ ಮಾಡಿದ್ದಾರೆ.
ಈಗಾಗಲೆ ಪದ್ಮಾವತಿ ಸಿನಿಮಾ ಸಾಕಷ್ಟು ವಿವಾದಗಳನ್ನು ಎದುರಿಸುತ್ತಿದೆ. ಆದರೆ ಬಾಲಿವುಡ್ ಖ್ಯಾತ ನಟರಾದ ಅಮಿತಾಭ್ ಬಚ್ಚನ್, ಅಮೀರ್ ಖಾನ್, ಶಾರೂಕ್ ಖಾನ್ ಇದರ ಕುರಿತು ಯಾಕೆ ಏನೂ ಪ್ರತಿಕ್ರಿಯೆ ನೀಡುತ್ತಿಲ್ಲ ಎಂದು ಜನ ಕೇಳುತ್ತಿದ್ದಾರೆ ಎಂದು ಪಟ್ನಾ ಸಾಹೀಬ್ ಕ್ಷೇತ್ರದ ಸಂಸದರೂ ಆಗಿರುವ ಸಿನ್ಹಾ ಹೇಳಿದ್ದಾರೆ.