ನವದೆಹಲಿ: ಕಾಂಗ್ರೆಸ್ ಹೈಕಮಾಂಡ್ ಗೆ ಇಂದು ಮಹತ್ವದ ದಿನ. ಇಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಕಾರ್ಯಕಾರಿಣಿ ಸಭೆ ನಡೆಯಲಿದೆ.
ಸಭೆಯಲ್ಲಿ ರಾಹುಲ್ ಗಾಂಧಿಯನ್ನು ಅಧಿಕೃತವಾಗಿ ಪಕ್ಷದ ಅಧ್ಯಕ್ಷ ಪಟ್ಟಕ್ಕೇರಿಸುವ ಬಗ್ಗೆ ಚರ್ಚೆ ನಡೆಯಲಿದೆ. ಅಲ್ಲದೆ ರಾಷ್ಟ್ರಪತಿ ಚುನಾವಣೆ ಹಾಗೂ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ಮಣಿಸಲು ದೇಶದ ಪ್ರಮುಖ ವಿರೋಧ ಪಕ್ಷಗಳು ಒಂದಾಗುವ ಬಗ್ಗೆ ಚರ್ಚೆಗಳಾಗಲಿವೆ.
ಮುಖ್ಯವಾಗಿ ರಾಹುಲ್ ಗಾಂಧಿಗೆ ಪಟ್ಟ ಕಟ್ಟುವ ಬಗ್ಗೆ ನಿರ್ಧಾರ ಹೊರಬೀಳಲಿದೆ. ಅ.15 ರೊಳಗಾಗಿ ಕಾಂಗ್ರೆಸ್ ಹೊಸ ಅಧ್ಯಕ್ಷನ ಘೋಷಣೆ ಮಾಡಬೇಕು. ಹೀಗಾಗಿ ಇಂದು ನಡೆಯಲಿರುವ ಕಾರ್ಯಕಾರಿಣಿ ಸಭೆ ರಾಹುಲ್ ಪಾಲಿಗೆ ಬಹುಮುಖ್ಯವಾಗಲಿದೆ.