ನಗರದಲ್ಲಿರುವ ಸತೀಶ್ ಧವನ್ ಉಡಾವಣೆ ಕೇಂದ್ರದಿಂದ ಏಕಕಾಲಕ್ಕೆ ಎರಡು ಕಕ್ಷೆಗಳಿಗೆ 8 ಉಪಗ್ರಹಗಳನ್ನು ಉಡಾವಣೆ ಮಾಡುವ ಮೂಲಕ ಭಾರತೀಯ ಬಾಹ್ಕಾಕಾಶ ಸಂಸ್ಥೆ ಇಸ್ರೋ ಮತ್ತೊಂದು ಹೊಸ ಮೈಲುಗಲ್ಲು ಸ್ಥಾಪಿಸಿದೆ.
ಇಂದು ಬೆಳಗ್ಗೆ ಸುಮಾರು 9.12ಕ್ಕೆ ಉಡಾವಣೆಯಾದ ಉಪಗ್ರಹಗಳು ಸುಮಾರು 17 ನಿಮಿಷಗಳ ಅವಧಿಯಲ್ಲಿ ಭಾರತದ ಬಹು ಉದ್ದೇಶಿತ ಪ್ರಮುಖ ಹವಾಮಾನ ಉಪಗ್ರಹ ಸ್ಕಾಟ್ಸ್ಯಾಟ್-1 ಅನ್ನು ಪಿಎಸ್ ಎಲ್ ವಿ ಕಕ್ಷೆಗೆ ಸೇರಿಸಿವೆ. ಜನಪೋಯೋಗಿ ಬಳಕೆಗೆ ಬಳಸಿಕೊಳ್ಳುವ ನಿಟ್ಟಿನಲ್ಲಿ ಉಡಾವಣೆ ಮಾಡಲಾಗಿದೆ.
ಉಪಗ್ರಹವು ಹವಾಮಾನ ವರದಿ ಮತ್ತು ಮುನ್ಸೂಚನೆ, ಗಾಳಿಯ ದಿಕ್ಕು ಮತ್ತು ಚಲನೆ ಸೇರಿ ಹಲವು ಪ್ರಮುಖ ದತ್ತಾಂಶವನ್ನು ನಿಯಂತ್ರಣ ಕೇಂದ್ರಕ್ಕೆ ಮಾಹಿತಿಗಳನ್ನು ರವಾನಿಸಲಿದೆ ಎಂದು ಮೂಲಗಳು ತಿಳಿಸಿವೆ.
ಇಂದು ಎಂಟು ಉಪಗ್ರಹಗಳನ್ನು ಬಾಹ್ಯಾಕಾಶ ಕೇಂದ್ರಗಳಿಗೆ ಉಡಾವಣೆ ಮಾಡುವ ಮೂಲಕ ಭಾರತ ಮತ್ತೊಂದು ಸಾಧನೆಗೈದಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ