ಬ್ರಿಟನ್ನ ಉಪಗ್ರಹಗಳನ್ನು ಯಶಸ್ವಿಯಾಗಿ ಉಡಾವಣೆ ಮಾಡಿದ ಇಸ್ರೋ

ಮಂಗಳವಾರ, 28 ಮಾರ್ಚ್ 2023 (08:35 IST)
ಶ್ರೀಹರಿಕೋಟಾ : ಭಾರತೀಯ ಬಾಹ್ಯಕಾಶ ಸಂಸ್ಥೆ ಭಾನುವಾರ ಬೆಳಗ್ಗೆ ಶ್ರೀಹರಿಕೋಟಾ ಬಾಹ್ಯಾಕಾಶ ನಿಲ್ದಾಣದಿಂದ 36 ಉಪಗ್ರಹಗಳನ್ನು ಹೊತ್ತ ರಾಕೆಟ್ ಅನ್ನು ಉಡಾವಣೆ ಮಾಡಿದೆ.
 
ಒನ್ ವೆಬ್ ಇಂಡಿಯಾ -2 ಮಿಷನ್ನ ಭಾಗವಾಗಿ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಲಾಂಚ್ ವೆಹಿಕಲ್ ಮಾರ್ಕ್-3 ರಾಕೆಟ್ ಅನ್ನು ಕಕ್ಷೆಗೆ ಹಾರಿಸಿದೆ. ಬ್ರಿಟನ್ ಮೂಲದ ಒನ್ವೆಬ್ ಗ್ರೂಪ್ಗೆ ಸೇರಿದ 36 ಉಪಗ್ರಹಗಳನ್ನು ಹೊತ್ತ ಇಸ್ರೋದ ಅತ್ಯಂತ ಭಾರವಾದ ಲಾಂಚ್ ವೆಹಿಕಲ್ ಮಾರ್ಕ್ – 3 ಉಡಾವಣಾ ನೌಕೆ ನಭಕ್ಕೆ ಹಾರಿತು.

ಉಪಗ್ರಹ ಉಡಾವಣೆ ಬೆನ್ನಲ್ಲೇ ಒನ್ವೆಬ್ ಟ್ವೀಟ್ ಮಾಡಿದೆ. ಯಶಸ್ವಿ ಉಡಾವಣೆಗಾಗಿ ಇಸ್ರೋ ಹಾಗೂ ನ್ಯೂ ಸ್ಪೇಸ್ ಇಂಡಿಯಾ ಲಿಮಿಟೆಡ್ನಲ್ಲಿರುವ ಎಲ್ಲಾ ಸಹೋದ್ಯೋಗಿಗಳಿಗೆ ಧನ್ಯವಾದಗಳನ್ನು ತಿಳಿಸಿದೆ. ಇದು ಸರ್ಕಾರಕ್ಕೆ ಹಾಗೂ ಕಂಪನಿಗಳಿಗೆ ಸಂಪರ್ಕವನ್ನು ಸಕ್ರಿಯಗೊಳಿಸುತ್ತದೆ ಎಂದು ಟ್ವೀಟ್ನಲ್ಲಿ ತಿಳಿಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ