ಸಭ್ಯ ಸಮಾಜಕ್ಕೆ ನಾಚಿಕೆಗೇಡಿನ ಸಂಗತಿ – ತಪ್ಪಿಸ್ಥರನ್ನ ಬಿಡೋದಿಲ್ಲ : ನರೇಂದ್ರ ಮೋದಿ
ನಾನು ದೇಶದ ಜನತೆಗೆ ಭರವಸೆ ನೀಡುತ್ತೇನೆ. ಪ್ರಕರಣದ ತಪ್ಪಿತಸ್ಥರನ್ನ ಯಾವುದೇ ಕಾರಣಕ್ಕೂ ಬಿಡುವುದಿಲ್ಲ. ಕಾನೂನು ತನ್ನ ಎಲ್ಲಾ ಶಕ್ತಿಯೊಂದಿಗೆ ತನ್ನ ಕ್ರಮ ತೆಗೆದುಕೊಳ್ಳುತ್ತದೆ. ಮಣಿಪುರದ ಸಹೋದರಿಯರ ಜೊತೆಗೆ ನಡೆದ ಘಟನೆ ಎಂದಿಗೂ ಕ್ಷಮಿಸಲು ಸಾಧ್ಯವಿಲ್ಲ ಎಂದು ಗುಡುಗಿದ್ದಾರೆ.
ರಾಜಸ್ಥಾನ, ಮಣಿಪುರ ಅಥವಾ ಛತ್ತೀಸ್ಗಢ ಆಗಿರಲಿ, ನಮ್ಮ ಎಲ್ಲಾ ಮಹಿಳೆಯರಿಗೆ ರಕ್ಷಣೆ ನೀಡಲು ಕಠಿಣ ಕಾನೂನು ಜಾರಿ ಮಾಡಲು ನಾನು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ತಿಳಿಸುತ್ತೇನೆ. ರಾಜಕೀಯಕ್ಕಿಂತ ಮಿಗಿಲಾಗಿ ಮಹಿಳೆಯರ ರಕ್ಷಣೆ ಬಗ್ಗೆ ನಾವು ಚಿಂತಿಸಬೇಕು ಎಂದು ಸಂಸತ್ತಿನ ಮುಂಗಾರು ಅಧಿವೇಶನಕ್ಕೆ ಮುಂಚಿತವಾಗಿ ಪ್ರಧಾನಿ ಮೋದಿ ಹೇಳಿದರು.