ರಾಜಸ್ಥಾನದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವುದು ಬಹುತೇಕ ಖಚಿತ- ಸಚಿನ್ ಪೈಲಟ್

ಮಂಗಳವಾರ, 11 ಡಿಸೆಂಬರ್ 2018 (12:15 IST)
ರಾಜಸ್ಥಾನ : ರಾಜಸ್ಥಾನ ವಿಧಾಸನಭಾ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದ್ದು, ಈಗಾಗಲೇ ರಾಜಸ್ಥಾನದಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.


ಈ ಕುರಿತು ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ನ ಮುಖ್ಯಮಂತ್ರಿ ಅಭ್ಯರ್ಥಿ ಸಚಿನ್ ಪೈಲಟ್, ‘ನಾವು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕೇವಲ 21 ಸ್ಥಾನಗಳನ್ನು ಗಳಿಸಿದ್ದೇವು. ಆದರೆ ಈ ಬಾರಿ ನಾವು ಮುನ್ನಡೆ ಸಾಧಿಸಿದ್ದೇವೆ, ರಾಜಸ್ಥಾನದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವುದು ಬಹುತೇಕ ಖಚಿತವಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.


ರಾಜಸ್ಥಾನದಲ್ಲಿ ಎಷ್ಟು ಸ್ಥಾನ ಗೆಲ್ಲುತ್ತೇವೆ ಎಂಬುದು ಫಲಿತಾಂಶ ಹೊರಬಿದ್ದ ನಂತರವೇ ತಿಳಿಯಬರಬೇಕಿದೆ ಎಂದು ಸಚಿನ್ ಪೈಲಟ್ ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ